ADVERTISEMENT

ವಿನಯ್‌ ಸೋಮಯ್ಯ ಆತ್ಮಹತ್ಯೆ ಪ್ರಕರಣ: ತಲೆಮರೆಸಿಕೊಂಡ ತೆನ್ನಿರ ಮೈನಾ

​ಪ್ರಜಾವಾಣಿ ವಾರ್ತೆ
Published 7 ಏಪ್ರಿಲ್ 2025, 16:08 IST
Last Updated 7 ಏಪ್ರಿಲ್ 2025, 16:08 IST
<div class="paragraphs"><p>ತೆನ್ನಿರ ಮೈನಾ</p></div>

ತೆನ್ನಿರ ಮೈನಾ

   

ಬೆಂಗಳೂರು: ಕೊಡಗು ಜಿಲ್ಲೆಯ ಬಿಜೆಪಿ ಕಾರ್ಯಕರ್ತ ವಿನಯ್‌ ಸೋಮಯ್ಯ ಅವರ ಆತ್ಮಹತ್ಯೆ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಹೆಣ್ಣೂರು ಠಾಣೆ ಪೊಲೀಸರು, ವಿಚಾರಣೆಗೆ ಹಾಜರಾಗುವಂತೆ ಪ್ರಕರಣದ ಆರೋಪಿ ತೆನ್ನಿರ ಮೈನಾ ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ.

‘ಏಳು ದಿನಗಳ ಒಳಗಾಗಿ ವಿಚಾರಣೆಗೆ ಬಂದು ಪ್ರಕರಣದ ಕುರಿತು ವಿವರಣೆ ನೀಡಬೇಕು’ ಎಂದು ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿದೆ ಎಂಬುದು ಗೊತ್ತಾಗಿದೆ. ಮತ್ತೊಂದೆಡೆ ಆರೋಪಿ ತೆನ್ನಿರ ಮೈನಾ ಅವರು ತಲೆಮರೆಸಿಕೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ADVERTISEMENT

‘ವಿನಯ್‌ ಕೆಲಸ ಮಾಡುತ್ತಿದ್ದ ಖಾಸಗಿ ಕಂಪನಿಯ ಕಚೇರಿಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಘಟನೆ ನಡೆದ ಸ್ಥಳದಲ್ಲೂ ಕೆಲವು ದಾಖಲೆಗಳನ್ನು ಜಪ್ತಿ ಮಾಡಲಾಗಿತ್ತು. ಅಲ್ಲದೇ ಅವರ ಮೊಬೈಲ್‌, ಲ್ಯಾಪ್‌ಟಾಪ್‌ ಹಾಗೂ ಮರಣ ಪತ್ರವನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ (ಎಫ್‌ಎಸ್‌ಎಲ್‌) ರವಾನೆ ಮಾಡಲಾಗಿತ್ತು. ತಜ್ಞರು ಪರಿಶೀಲನೆ ನಡೆಸಿ ಕೆಲವೇ ದಿನಗಳಲ್ಲಿ ವರದಿ ಸಲ್ಲಿಸಲಿದ್ದಾರೆ. ವರದಿ ಬಂದ ಬಳಿಕ ವಿನಯ್‌ ಅವರು ಮರಣ ಪತ್ರ ಹಾಕಿದ್ದು ಯಾವ ಗ್ರೂಪ್‌ಗೆ ಎಂಬುದು ಗೊತ್ತಾಗಲಿದೆ. ವಿನಯ್‌ ಕೊನೆಯದಾಗಿ ಯಾರಿಗೆ ವಾಟ್ಸ್‌ಆ್ಯಪ್‌ ಮೂಲಕ ಸಂದೇಶ ಕಳುಹಿಸಿದ್ದರು. ಕೊನೆಯ ದಿನ ಯಾವೆಲ್ಲ ಸ್ಥಳಕ್ಕೆ ಭೇಟಿ ನೀಡಿದ್ದರು ಎಂಬುದು ಗೊತ್ತಾಗಲಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.