ADVERTISEMENT

ನಿಯಮ ಉಲ್ಲಂಘನೆ: 197 ಸವಾರರ ವಿರುದ್ಧ ಪ್ರಕರಣ

​ಪ್ರಜಾವಾಣಿ ವಾರ್ತೆ
Published 11 ಜುಲೈ 2024, 19:58 IST
Last Updated 11 ಜುಲೈ 2024, 19:58 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಬೆಂಗಳೂರು: ನಗರದಲ್ಲಿ ಪ್ರತ್ಯೇಕ ಪ್ರಕರಣಗಳಲ್ಲಿ ಸಂಚಾರ ನಿಯಮ ಉಲ್ಲಂಘನೆಗೆ ಸಂಬಂಧಿಸಿದಂತೆ 192 ವಾಹನ ಸವಾರರ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ಒಟ್ಟು ₹96 ಸಾವಿರ ದಂಡ ವಸೂಲು ಮಾಡಲಾಗಿದೆ.

ರಸ್ತೆಗಳಲ್ಲಿ ಏಕಮುಖ ಸಂಚಾರ ನಿಯಮ ಉಲ್ಲಂಘಿಸಿದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ದೂರುಗಳು ಬಂದ ಹಿನ್ನೆಲೆಯಲ್ಲಿ ಪೂರ್ವ ವಿಭಾಗದ ಸಂಚಾರ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ, ವಾಹನಗಳ ತಪಾಸಣೆ ನಡೆಸಿದ್ದಾರೆ. ಈ ಪೈಕಿ 167 ವಾಹನ ಸವಾರರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಪಾದಚಾರಿ ಮಾರ್ಗದ ಮೇಲೆ ವಾಹನ ಚಲಾಯಿಸಿದ ಪ್ರಕರಣದಲ್ಲಿ 25 ಮಂದಿ ವಿರುದ್ಧ ದೂರು ದಾಖಲಿಸಲಾಗಿದೆ.

ADVERTISEMENT

ಟ್ಯಾಂಕರ್‌ ತಪಾಸಣೆ: 216 ವಾಟರ್ ಟ್ಯಾಂಕರ್‌ಗಳನ್ನು ತಪಾಸಣೆ ಮಾಡಿ, ದಾಖಲಾತಿ ಹೊಂದಿರದ 94 ವಾಹನಗಳ ಚಾಲಕರ ಮೇಲೆ ಪ್ರಕರಣ ದಾಖಲಿಸಲಾಗಿದೆ. ಒಟ್ಟು ₹44,500 ದಂಡ ವಸೂಲು ಮಾಡಲಾಗಿದೆ. 

ಸುಗಮ ವಾಹನ ಸಂಚಾರಕ್ಕೆ ಸವಾರರು ಕಡ್ಡಾಯವಾಗಿ ನಿಯಮ ಪಾಲಿಸಬೇಕು. ಸಂಚಾರ ನಿಯಮಗಳ ಕುರಿತು ಅರಿವು ಮೂಡಿಸಲಾಗುವುದು ಎಂದು ಸಂಚಾರ ವಿಭಾಗದ ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.