ADVERTISEMENT

ದಂಡ ಪಾವತಿಗೆ ವರ್ಚುಯಲ್ ಕೋರ್ಟ್ ವ್ಯವಸ್ಥೆ

​ಪ್ರಜಾವಾಣಿ ವಾರ್ತೆ
Published 6 ಆಗಸ್ಟ್ 2020, 18:44 IST
Last Updated 6 ಆಗಸ್ಟ್ 2020, 18:44 IST
ಹೈಕೋರ್ಟ್
ಹೈಕೋರ್ಟ್   

ಬೆಂಗಳೂರು: ನ್ಯಾಯಾಲಯಗಳ ಕಾರ್ಯ ಕಲಾಪಗಳನ್ನು ಆನ್‌ಲೈನ್‌ಗೊಳಿಸುವ ನಿಟ್ಟಿನಲ್ಲಿ ಹೈಕೋರ್ಟ್ ಅಳವಡಿಸಿಕೊಂಡಿರುವವರ್ಚುಯಲ್ ಕೋರ್ಟ್ ವ್ಯವಸ್ಥೆಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಗುರುವಾರ ಚಾಲನೆ ನೀಡಿದರು.

ವರ್ಚುಯಲ್ ಕೋರ್ಟ್ ಫಾರ್ ಟ್ರಾಫಿಕ್ ಚಲನ್ ಆ್ಯಂಡ್ ಇ-ಫೈಲಿಂಗ್ ವ್ಯವಸ್ಥೆ ಉದ್ಘಾಟನಾ ಕಾರ್ಯಕ್ರಮಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಪಾಲ್ಗೊಂಡಿದ್ದ ಅವರು, ‘ಈ ವ್ಯವಸ್ಥೆ ಮೂಲಕ ದಿನದ 24 ಗಂಟೆಯೂ ನ್ಯಾಯದ ಬಾಗಿಲು ತಟ್ಟಬಹುದಾದ ಯುಗ ಆರಂಭವಾದಂತೆ ಆಗಿದೆ’ ಎಂದು ಅಭಿಪ್ರಾಯಪಟ್ಟರು.

ಹೈಕೋರ್ಟ್ ನ್ಯಾಯಮೂರ್ತಿ ಅರವಿಂದ್ ಕುಮಾರ್, ‘ಬೆಂಗಳೂರಿನಲ್ಲಿ ಪ್ರತಿದಿನ ಸಂಚಾರ ನಿಯಮ ಉಲ್ಲಂಘನೆಯ 9 ಸಾವಿರ ಪ್ರಕರಣಗಳು ದಾಖಲಾಗುತ್ತಿವೆ. ಈ ಪ್ರಕರಣಗಳಲ್ಲಿ ದಂಡ ಕಟ್ಟಲು ಕೋರ್ಟ್‌ಗೆ ಖುದ್ದಾಗಿ ಬರಲು ಹಲವರಿಗೆ ಸಾಧ್ಯವಾಗುತ್ತಿಲ್ಲ. ಇನ್ನು ಮುಂದೆ ವರ್ಚುಯಲ್ ಕೋರ್ಟ್ ವ್ಯವಸ್ಥೆಯಲ್ಲಿ ಆನ್‌ಲೈನ್ ಮೂಲಕವೇ ದಂಡ ಪಾವತಿಸಬಹುದು‘ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.