ADVERTISEMENT

ಇದೇ 18ರಂದು ವಿಷ್ಣುವರ್ಧನ್ ಜನ್ಮದಿನಾಚರಣೆ

​ಪ್ರಜಾವಾಣಿ ವಾರ್ತೆ
Published 15 ಸೆಪ್ಟೆಂಬರ್ 2023, 14:39 IST
Last Updated 15 ಸೆಪ್ಟೆಂಬರ್ 2023, 14:39 IST
ವಿಷ್ಣುವರ್ಧನ್
ವಿಷ್ಣುವರ್ಧನ್   

ಬೆಂಗಳೂರು: ನಟ ವಿಷ್ಣುವರ್ಧನ್ ಅವರ 73ನೇ ವರ್ಷದ ಜನ್ಮದಿನವನ್ನು ಇದೇ 18ರಂದು ಅಭಿಮಾನ್‌ ಸ್ಟುಡಿಯೊದಲ್ಲಿ ಆಚರಿಸಲಾಗುವುದು ಎಂದು ವಿ.ಎಸ್.ಎಸ್. ಅಭಿಮಾನ್ ಡಾ. ವಿಷ್ಣುವರ್ಧನ್ ಪುಣ್ಯಭೂಮಿ ಟ್ರಸ್ಟ್‌ ತಿಳಿಸಿದೆ.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಟ್ರಸ್ಟ್‌ನ ಅಧ್ಯಕ್ಷ ರಾಜುಗೌಡ, ‘ಈ ಬಾರಿ ವಿಷ್ಣುವರ್ಧನ್‌ ಅವರ ಜನ್ಮದಿನವನ್ನು ಸರಳವಾಗಿ ಆಚರಿಸಲಾಗುವುದು. ಅಭಿಮಾನ್‌ ಸ್ಟುಡಿಯೊದಲ್ಲಿರುವ ಅವರ ಸಮಾಧಿಗೆ ಪೂಜೆ ಸಲ್ಲಿಸಿ, ಅನ್ನದಾನ, ರಕ್ತದಾನ ಶಿಬಿರಗಳನ್ನು ಏರ್ಪಡಿಸಲಾಗಿದೆ’ ಎಂದು ತಿಳಿಸಿದರು.

‘ಅಭಿಮಾನ್‌ ಸ್ಟುಡಿಯೊದಲ್ಲಿರುವ ವಿಷ್ಣುವರ್ಧನ್‌ ಸಮಾಧಿಯ ಭೂಮಿಗೆ ಸಂಬಂಧಿಸಿದ ಪ್ರಕರಣವನ್ನು 2023ರ ಆ. 21ರಂದು ಹೈಕೋರ್ಟ್‌ ವಜಾಗೊಳಿಸಿದೆ. ಆದ್ದರಿಂದ, ಸರ್ಕಾರ ಕೂಡಲೇ ಅಭಿಮಾನ್‌ ಸ್ಟುಡಿಯೊದ ಮಾಲೀಕರೊಂದಿಗೆ ಸಭೆ ನಡೆಸಿ ವಿಷ್ಣು ವರ್ಧನ್‌ ಅವರ ಸಮಾಧಿಯ 10 ಗುಂಟೆ ಜಾಗದ ಪ್ರಕರಣವನ್ನು ಇತ್ಯರ್ಥಪಡಿಸಬೇಕು’ ಎಂದು ಆಗ್ರಹಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.