ADVERTISEMENT

ವಿಷ್ಣುವರ್ಧನ್‌ ಸ್ಮಾರಕ: ಕಾನೂನು ತೊಡಕು ನಿವಾರಣೆ

​ಪ್ರಜಾವಾಣಿ ವಾರ್ತೆ
Published 12 ಏಪ್ರಿಲ್ 2019, 19:25 IST
Last Updated 12 ಏಪ್ರಿಲ್ 2019, 19:25 IST

ಬೆಂಗಳೂರು: ಮೈಸೂರಿನ ಕಸಬಾ ಹೋಬಳಿಯ ಹಾಲಾಳು ಗ್ರಾಮದಲ್ಲಿ ದಿವಂಗತ ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಿಸಲು ಇದ್ದ ಕಾನೂನಿನ ತೊಡಕು ನಿವಾರಣೆಯಾಗಿದೆ.

ವಿಷ್ಣುವರ್ಧನ್ ಸ್ಮಾರಕ ನಿರ್ಮಾಣಕ್ಕೆ ಮೈಸೂರು ಕಸಬಾ ಹೋಬಳಿ ಹಾಲಾಳು ಗ್ರಾಮದ ಸರ್ವೇ ನಂ 8ರಲ್ಲಿ ಐದು ಎಕರೆ ಸರ್ಕಾರಿ ಜಮೀನನ್ನು ರಾಜ್ಯ ಕಂದಾಯ ಇಲಾಖೆ ಮಂಜೂರು ಮಾಡಿತ್ತು.

ಈ ಮಂಜೂರಾತಿ ಕುರಿತಂತೆ ಜಯಪುರ ಹೋಬಳಿಯ ಉದ್ಬೂರು ಗ್ರಾಮದ ಮಹದೇವಪ್ಪ ಸೇರಿದಂತೆ ಐವರು ತಕರಾರು ತೆಗೆದಿದ್ದರು. ಈ ವ್ಯಾಜ್ಯ ಕೋರ್ಟ್‌ ಮೆಟ್ಟಿಲೇರಿತ್ತು. ಇದರಿಂದಾಗಿ ಮೈಸೂರಿನ ನಾಲ್ಕನೇ ಹೆಚ್ಚುವರಿ ಸಿವಿಲ್‌ ಹಾಗೂ ಜೆಎಂಎಫ್‌ಸಿ ನ್ಯಾಯಾಲಯ ಕಾಮಗಾರಿ ಮುಂದುವರಿಕೆಗೆ ತಡೆ ನೀಡಿತ್ತು.

ADVERTISEMENT

ಈ ತಡೆಯಾಜ್ಞೆ ತೆರವುಗೊಳಿಸುವಂತೆ ಕೋರಿ ರಾಜ್ಯ ಕಂದಾಯ ಇಲಾಖೆ ಕಾರ್ಯದರ್ಶಿ ಸೇರಿದಂತೆ ಮೈಸೂರು ಜಿಲ್ಲಾಡಳಿತ ಹೈಕೋರ್ಟ್‌ ಮೆಟ್ಟಿಲೇರಿತ್ತು.

ಈ ಅರ್ಜಿಯನ್ನು ನ್ಯಾಯಮೂರ್ತಿ ಜಿ.ನರೇಂದರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿ ಅಧೀನ ನ್ಯಾಯಾಲಯದ ಆದೇಶಕ್ಕೆ ತಡೆ ನೀಡಿದೆ. ಇದರಿಂದಾಗಿ ಯಥಾಸ್ಥಿತಿ ಕಾಯ್ದುಕೊಳ್ಳಲು ಸೂಚಿಸಿದ್ದ ಮಧ್ಯಂತರ ಆದೇಶ ತೆರವುಗೊಂಡಂತಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.