ಶೋಭಾ ಕರಂದ್ಲಾಜೆ
ಬೆಂಗಳೂರು: ಬೆಂಗಳೂರಿನ ಅಭಿಮಾನ್ ಸ್ಟುಡಿಯೊ ಆವರಣದಲ್ಲಿರುವ ವಿಷ್ಣುವರ್ಧನ್ ಸಮಾಧಿಯನ್ನು ಶಾಶ್ವತವಾಗಿ ಸಂರಕ್ಷಿಸಿ ರಾಷ್ಟ್ರೀಯ ಮಟ್ಟದ ಆಕರ್ಷಣೆಯ ಕೇಂದ್ರವಾಗಿ ರೂಪಿಸಬೇಕು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಒತ್ತಾಯಿಸಿದ್ಧಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈ ಕುರಿತು ಪತ್ರ ಬರೆದಿರುವ ಅವರು, ವಿಷ್ಣುವರ್ಧನ್ ಸಮಾಧಿಯ ಜಾಗವನ್ನು ಕೆಲವರು ತಮ್ಮ ಭೂಮಿ ಎಂದು ಹೇಳಿಕೊಂಡು, ಸಮಾಧಿಯನ್ನು ರಾತ್ರೊರಾತ್ರಿ ಧ್ವಂಸ ಮಾಡಿರುವುದು ನೋವು ತಂದಿದೆ. ವಿಷ್ಣು ಅವರ ಸಮಾಧಿ ಇರುವ ಜಾಗವನ್ನು ಸ್ಮಾರಕವನ್ನಾಗಿ ಮಾಡಿ, ಕನ್ನಡ ಮತ್ತು ಸಂಸ್ಕೃತಿಯ ಪ್ರತೀಕವಾಗಿ ಅಭಿವೃದ್ದಿಪಡಿಸಬೇಕು ಎಂದು ಸಲಹೆ ನೀಡಿದ್ದಾರೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಈ ಭೂಮಿಯನ್ನು ತಕ್ಷಣ ಸ್ವಾಧೀನಪಡಿಸಿಕೊಂಡು ಮಾಲೀಕರಿಗೆ ನಿಯಮಾನುಸಾರ ಪರಿಹಾರ ನೀಡಬೇಕು ಎಂದು ಸೂಚಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.