ಬೆಂಗಳೂರು: ಕೆಂಗೇರಿಯಲ್ಲಿರುವ ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಉತ್ತರಾಧಿಕಾರಿಯಾಗಿ ಕೆಎಎಸ್ ಅಧಿಕಾರಿಯ ಹುದ್ದೆಯಿಂದ ಇತ್ತೀಚೆಗಷ್ಟೇ ಸ್ವಯಂ ನಿವೃತ್ತಿ ಪಡೆದಿರುವ ಎಚ್.ಎಲ್. ನಾಗರಾಜು ಅವರು ಡಿ.15 ರಂದು ಪಟ್ಟಾಧಿಕಾರ ಸ್ವೀಕರಿಸಲಿದ್ದಾರೆ.
‘ವಿಶೇಷ ಜಿಲ್ಲಾಧಿಕಾರಿಯಾಗಿ ಸ್ವಯಂ ನಿವೃತ್ತಿ ಪಡೆದಿರುವ ಎಚ್.ಎಲ್.ನಾಗರಾಜು ಅವರು ಕುಣಿಗಲ್ ತಾಲ್ಲೂಕಿನ, ಹೊನ್ನೇನಹಳ್ಳಿ ಗ್ರಾಮದ ಲಿಂಗಯ್ಯ ಮತ್ತು ಗಂಗಮ್ಮ ಅವರ ಪುತ್ರ. ಅವರು ನಿಶ್ಚಲಾನಂದನಾಥ ಸ್ವಾಮೀಜಿಯಾಗಿ ದೀಕ್ಷೆ ಪಡೆದು ಮಠವನ್ನು ಮುನ್ನಡೆಸಲಿದ್ದಾರೆ’ ಎಂದು ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಭಾನುವಾರ ಬೆಳಿಗ್ಗೆ 10.30ಕ್ಕೆ ನಡೆಯುವ ಪಟ್ಟಾಧಿಕಾರ ಮಹೋತ್ಸವದಲ್ಲಿ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ, ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ, ತೋಂಟದ ಸಿದ್ಧರಾಮ ಸ್ವಾಮೀಜಿ, ನಿಡುಮಾಮಿಡಿ ಮಠದ ವೀರಭದ್ರ ಚನ್ನಮಲ್ಲ ದೇಶಿಕೆಂದ್ರ ಸ್ವಾಮೀಜಿ, ತರಳಬಾಳು ಮಠದ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಬೇಲಿಮಠದ ಶಿವರುದ್ರ ಸ್ವಾಮೀಜಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.