ಬೆಂಗಳೂರು: ಆಂಧ್ರ ಪ್ರದೇಶದ ತಿರುಮಲ ತಿರುಪತಿ ಟ್ರಸ್ಟ್ ಸದಸ್ಯರಾಗಿ ಶಾಸಕ ಹಾಗೂ ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ನೇಮಕಗೊಂಡಿದ್ದಾರೆ.
ಬೆಂಗಳೂರಿನ ತಿರುಮಲ ತಿರುಪತಿ ಟ್ರಸ್ಟ್‌ನ ಸ್ಥಳೀಯ ಸಲಹಾ ಮಂಡಳಿ ಉಪಾಧ್ಯಕ್ಷರಾಗಿ ವಿಶ್ವನಾಥ್ ಅವರು ಮೂರು ವರ್ಷ ಸೇವೆ ಸಲ್ಲಿಸಿದ್ದರು. ಅವರನ್ನು ಟಿಟಿಡಿ ಸದಸ್ಯರನ್ನಾಗಿ ಆಂಧ್ರ ಪ್ರದೇಶದ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಆದೇಶ ಹೊರಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.