ADVERTISEMENT

ವಿಟಿಯು ಕುಲಪತಿ ನೇಮಕಾತಿ: ಡಿ.2ಕ್ಕೆ ವಿಚಾರಣೆ

​ಪ್ರಜಾವಾಣಿ ವಾರ್ತೆ
Published 8 ನವೆಂಬರ್ 2022, 20:29 IST
Last Updated 8 ನವೆಂಬರ್ 2022, 20:29 IST

ಬೆಂಗಳೂರು: ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ಎಸ್.ವಿದ್ಯಾಶಂಕರ್ ನೇಮಕಾತಿಯ ಸಿಂಧುತ್ವ ಪ್ರಶ್ನಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಹೈಕೋರ್ಟ್ ಡಿಸೆಂಬರ್ 2ರಂದು ವಿಚಾರಣೆ ನಡೆಸಲಿದೆ.

ಈ ಸಂಬಂಧ ಮೈಸೂರು ವಿವಿಯ ಮಾಜಿ ಹಂಗಾಮಿ ಕುಲಪತಿ ಪ್ರೊ. ಬಿ.ಶಿವರಾಜ್ ಪಿಐಎಲ್‌ ಸಲ್ಲಿಸಿದ್ದು, ‘ವಿದ್ಯಾಶಂಕರ್ಕರ್ನಾಟಕ ರಾಜ್ಯ ಮುಕ್ತ ವಿವಿ ಕುಲಪತಿಯಾಗಿದ್ದ ಅವಧಿಯಲ್ಲಿ ಹಲವು ಅಕ್ರಮಗಳನ್ನು ಎಸಗಿದ್ದಾರೆ. ಅವರ ವಿರುದ್ಧ ಹಲವು ಕ್ರಿಮಿನಲ್ ಪ್ರಕರಣಗಳು ವಿಚಾರಣೆಗೆ ಬಾಕಿ ಇವೆ’ ಎಂದು ಆರೋಪಿಸಿದ್ದಾರೆ. ‘ವಿಟಿಯು ಕುಲಪತಿ ನೇಮಕದ ಶೋಧನಾ ಸಮಿತಿ ರಚನೆಯೇ ಅಕ್ರಮ. ನಿಯಮಾನುಸಾರ ಸಮಿತಿಯಲ್ಲಿ ಯುಜಿಸಿ ಪ್ರತಿನಿಧಿ ನಾಮನಿರ್ದೇಶನ ಮಾಡಿಲ್ಲ’ ಎಂದುವಿವರಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT