ADVERTISEMENT

ವಿಐಟಿ ಪ್ರವೇಶ ಪರೀಕ್ಷೆ ರದ್ದು

​ಪ್ರಜಾವಾಣಿ ವಾರ್ತೆ
Published 10 ಜುಲೈ 2020, 20:26 IST
Last Updated 10 ಜುಲೈ 2020, 20:26 IST

ಬೆಂಗಳೂರು: ಕೊರೊನಾ ಸೋಂಕಿನ ಕಾರಣಕ್ಕೆ ವಿಲ್ಲೋರ್ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯು (ವಿಐಟಿ) ವಿವಿಧ ಎಂಜಿನಿಯರಿಂಗ್ ಕೋರ್ಸ್‍ಗಳ ಪ್ರವೇಶ ಪರೀಕ್ಷೆಗಳನ್ನು ರದ್ದುಪಡಿಸಲಾಗಿದೆ.

ಚೆನ್ನೈ, ಆಂಧ್ರಪ್ರದೇಶ ಹಾಗೂ ಮಧ್ಯಪ್ರದೇಶದಲ್ಲಿರುವ ವಿಐಟಿ ಸಮೂಹ ಸಂಸ್ಥೆಗಳಲ್ಲಿನ ವಿವಿಧ ಕೋರ್ಸ್‍ಗಳಿಗೆ ಪರೀಕ್ಷೆ ನಡೆಸಲಾಗುತ್ತಿತ್ತು.

ದ್ವಿತೀಯ ಪಿಯು ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ ಹಾಗೂ ಜೀವಶಾಸ್ತ್ರ ವಿಷಯಗಳಲ್ಲಿ ಪಡೆದಿರುವ ಅಂಕಗಳ ಆಧಾರದ ಮೇಲೆ ಈ ಬಾರಿ ಪ್ರವೇಶ ಪ್ರಕ್ರಿಯೆ ನಡೆಯಲಿದೆ. ಜೆಇಇ ಮುಖ್ಯ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನೂ ಪರಿಗಣಿಸಲಾಗುವುದು.

ADVERTISEMENT

ಅರ್ಜಿಗಳನ್ನು ವಿಐಟಿ ವೆಬ್‍ಸೈಟ್www.vit.ac.in ನಲ್ಲಿ ನೀಡಲಾಗಿದೆ. ಹೆಚ್ಚಿನ ಮಾಹಿತಿಗೆ ಇ-ಮೇಲ್: ugadmission@vit.ac.in ಅಥವಾ ದೂರವಾಣಿ ಸಂಖ್ಯೆ:1800-102-0536ಕ್ಕೆ ಸಂಪರ್ಕಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.