ಹಾರೋಹಳ್ಳಿಯಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾವ ಎಚ್.ಡಿ. ದೇವೇಗೌಡ ಅವರೊಂದಿಗೆ ಅಳಿಯ ಡಾ. ಸಿ.ಎನ್. ಮಂಜುನಾಥ್ ಚರ್ಚೆಯಲ್ಲಿ ತೊಡಗಿದ್ದ ಕ್ಷಣ
ಬೆಂಗಳೂರು: ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್. ಮಂಜುನಾಥ್ ಅವರನ್ನು ಲೋಕಸಭಾ ಚುನಾವಣೆಯಲ್ಲಿ ಬಹುಮತದಿಂದ ಆಯ್ಕೆ ಮಾಡಬೇಕು’ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಡಿ.ಎಸ್. ವೀರಯ್ಯ ಹೇಳಿದರು.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಲಕ್ಷಾಂತರ ಹೃದ್ರೋಗಿಗಳಿಗೆ ಜೀವದಾನ ನೀಡಿ, ನೊಂದವರ ಕಣ್ಣಿರು ಒರೆಸಿದ್ದ ಡಾ.ಸಿ.ಎನ್. ಮಂಜುನಾಥ್ ಅವರನ್ನು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಮತದಾರರು ಆಯ್ಕೆ ಮಾಡುವ ಮೂಲಕ ದೇಶ ಸೇವೆ ಮಾಡಲು ಅವಕಾಶ ಕಲ್ಪಿಸಬೇಕು’ ಎಂದು ಮನವಿ ಮಾಡಿದರು.
ವಿಶ್ವ ಕನ್ನಡ ಕಲಾ ಕೂಟದ ಅಧ್ಯಕ್ಷ ಹಲ್ಲೇಗೆರೆ ಕೃಷ್ಣ, ‘ಮಂಜುನಾಥ್ ಅವರು, ತಮ್ಮ ಸರಳ ಸೌಮ್ಯ ಸ್ವಭಾವದಿಂದಲೇ ಜನಪ್ರಿಯರಾಗಿದ್ದಾರೆ. ಸರ್ಕಾರಿ ಸ್ವಾಮ್ಯದ ಜಯದೇವ ಹೃದ್ರೋಗ ಸಂಸ್ಥೆಯನ್ನು ವಿಶ್ವಮಟ್ಟಕ್ಕೆ ಪರಿಚಯಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ. ಆದ್ದರಿಂದ, ಚುನಾವಣೆಯಲ್ಲಿ ಅವರನ್ನು ಆಯ್ಕೆ ಮಾಡಬೇಕು’ ಎಂದು ಹೇಳಿದರು. ವಿಶ್ವ ಕನ್ನಡ ಕಲಾ ಕೂಟದ ಉಪಾಧ್ಯಕ್ಷ ಸುರೇಶ್ ಬಾಬು ಸುದ್ದಿಗೋಷ್ಠಿಯಲ್ಲಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.