ಬೆಂಗಳೂರು: ಭಾರತೀಯ ವಿದ್ಯಾಭವನ ಮತ್ತು ಜ್ಯೋತಿ ಚಾರಿಟಬಲ್ ಟ್ರಸ್ಟ್ ಜಂಟಿಯಾಗಿ ನೀಡುವ ‘ವ್ಯಾಸಜ್ಯೋತಿ ಪ್ರಶಸ್ತಿ’ಗೆ ವಿದ್ವಾಂಸ ಅನಂತನಾರಾಯಣ ವಾದ್ಯಾರ್ ಆಯ್ಕೆಯಾಗಿದ್ದಾರೆ.
ಇದೇ 21ರಂದು ಬೆಳಿಗ್ಗೆ 11.30ಕ್ಕೆ ಭಾರತೀಯ ವಿದ್ಯಾ ಭವನದ ಕೆಆರ್‌ಜಿ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಜ್ಯೋತಿ ಚಾರಿಟಬಲ್ ಟ್ರಸ್ಟ್‌ನ ವಿಶ್ವಸ್ಥ ಎಂ. ನರಸಿಂಹನ್ ಪ್ರಶಸ್ತಿ ಪ್ರದಾನ ಮಾಡುತ್ತಾರೆ. ವಿದ್ಯಾಭವನದ ಅಧ್ಯಕ್ಷ ಎಚ್.ಎಂ. ಸುರೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುತ್ತಾರೆ.
ಇದೇ ಕಾರ್ಯಕ್ರಮದಲ್ಲಿ ಪಿ.ಎಸ್. ಗೀತಾ ಅವರು ‘ಗುರುವಿನ ಮಹತ್ವ’ ಎಂಬ ವಿಷಯದ ಬಗ್ಗೆ ಉಪನ್ಯಾಸ ನೀಡುತ್ತಾರೆ ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.