ADVERTISEMENT

ಬಿಎಂಸಿಆರ್‌ಐ: ಇಲ್ಲದ ಕಾರ್ಮಿಕರಿಗೆ ವೇತನ, ತನಿಖೆಗೆ ಹೈಕೋರ್ಟ್‌ ನಿರ್ದೇಶನ

​ಪ್ರಜಾವಾಣಿ ವಾರ್ತೆ
Published 10 ಸೆಪ್ಟೆಂಬರ್ 2020, 1:28 IST
Last Updated 10 ಸೆಪ್ಟೆಂಬರ್ 2020, 1:28 IST
ಹೈಕೋರ್ಟ್
ಹೈಕೋರ್ಟ್   

ಬೆಂಗಳೂರು: ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ(ಬಿಎಂಸಿಆರ್‌ಐ) ಇಲ್ಲದ ಕಾರ್ಮಿಕರ ಹೆಸರಿನಲ್ಲಿ ವೇತನ ಪಾವತಿಯಾಗುತ್ತಿರುವ ಬಗ್ಗೆ ಅಗತ್ಯ ಇದ್ದರೆ ತನಿಖೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಬಿಎಂಸಿಆರ್‌ಐ ಮತ್ತು ನಿಮ್ಯಾನ್ಸ್‌ನಲ್ಲಿ ಗುತ್ತಿಗೆ ಕಾರ್ಮಿಕರಿಗೆ ವೇತನ ಪಾವತಿಸಿಲ್ಲ ಎಂದು ಆರೋಪಿಸಿಆಲ್‌ ಇಂಡಿಯಾ ಸೆಂಟ್ರಲ್‌ ಕೌನ್ಸಿಲ್‌ ಆಫ್‌ ಟ್ರೇಡ್‌ ಯೂನಿಯನ್‌(ಎಐಸಿಸಿಟಿಯು) ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ.

‘ಒಬ್ಬ ಸ್ವಚ್ಛತಾ ಸಿಬ್ಬಂದಿ ಮೂರು ಜನ ಮಾಡುವ ಕೆಲಸ ಮಾಡುತ್ತಿದ್ದಾರೆ. ಉಳಿದವರು ದಾಖಲೆಗಳಲ್ಲಿ ಮಾತ್ರ ಇದ್ದು, ಸಾರ್ವಜನಿಕರ ಹಣ ಲೂಟಿಯಾಗುತ್ತಿದೆ’ ಎಂದು ಆರೋಪಿಸಿದೆ.

ADVERTISEMENT

ಈ ಎರಡೂ ಆರೋಪಗಳ ಬಗ್ಗೆ ಅಗತ್ಯ ಇದ್ದರೆ ತನಿಖೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ನಿರ್ದೇಶನ ನೀಡಿತು. ಕಾರ್ಮಿಕ ಕಾಯ್ದೆಗಳನ್ನು ಅನುಷ್ಠಾನಗೊಳಿಸಿರುವ ಬಗ್ಗೆ ಅನುಸರಣಾ ವರದಿ ಸಲ್ಲಿಸುವಂತೆ ಬಿಎಂಸಿಆರ್‌ಐ ಮತ್ತು ನಿಮ್ಹಾನ್ಸ್‌ಗೆ ಪೀಠ ಸೂಚಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.