ADVERTISEMENT

ಬೂತ್‌ ಮಟ್ಟದ ಸಮಿತಿಗೆ ಮಾರ್ಗಸೂಚಿ

​ಪ್ರಜಾವಾಣಿ ವಾರ್ತೆ
Published 11 ಜುಲೈ 2020, 5:36 IST
Last Updated 11 ಜುಲೈ 2020, 5:36 IST
ಬಿಬಿಎಂಪಿ
ಬಿಬಿಎಂಪಿ   

ಬೆಂಗಳೂರು: ವಾರ್ಡ್‌ ಮತ್ತು ಬೂತ್ ಮಟ್ಟದಲ್ಲಿ ಕೋವಿಡ್‌ ವಿಪತ್ತು ನಿರ್ವಹಣಾ ಸಮಿತಿಗಳನ್ನು ರಚನೆ ಮಾಡಲುಬಿಬಿಎಂಪಿಗೆ ನಿರ್ದೇಶನ ನೀಡಿರುವ ನಗರಾಭಿವೃದ್ಧಿ ಇಲಾಖೆ, ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.

‘ಈಗಾಗಲೇ ಇರುವ ವಾರ್ಡ್‌ ಸಮಿತಿಗಳನ್ನು ಕೋವಿಡ್ ನಿರ್ವಹಣೆಗೆ ಬಳಸಿಕೊಳ್ಳಬೇಕು. ಬೂತ್ ಮಟ್ಟದಲ್ಲೂ ಸಮಿತಿಗಳನ್ನು ರಚಿಸಿ ನಿರ್ವಹಣೆ ಜವಾಬ್ದಾರಿ ನೀಡುವುದು ಸೂಕ್ತ’ ಎಂದು ತಿಳಿಸಿದೆ.

‘ಸಮಿತಿ ಸದಸ್ಯರು ಹೇಗೆ ಕಾರ್ಯ ನಿರ್ವಹಿಸಬೇಕು ಎಂಬುದರ ಕುರಿತು ತರಬೇತಿ ನೀಡಬೇಕು. ಆಗ ಬೂತ್ ಮಟ್ಟದಲ್ಲೇ ಕೋವಿಡ್ ನಿಯಂತ್ರಿಸಬಹುದು’ ಎಂದು ಅಭಿಪ್ರಾಯಪಟ್ಟಿದೆ.

ADVERTISEMENT

‘ಸ್ಥಳೀಯ ಜನಪ್ರತಿನಿಧಿಗಳು, ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯರು, ಬಿಬಿಎಂಪಿ ಅಧಿಕಾರಿ, ಪೊಲೀಸ್ ಸಿಬ್ಬಂದಿ ಮತ್ತು ಸ್ವಯಂ ಸೇವಕರು ಸಮಿತಿಯಲ್ಲಿ ಇರುವಂತೆ ನೋಡಿಕೊಳ್ಳಬೇಕು’ ಎಂದು ತಿಳಿಸಿದೆ.

‘ಈ ಸಮಿತಿಯು ಕೊರೊನಾ ಸೋಂಕಿನ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು. ಸುಳ್ಳು ಸುದ್ದಿ ಮತ್ತು ತಪ್ಪು ಕಲ್ಪನೆಗಳಿಂದ ಜನ ಆತಂಕಕ್ಕೆ ಈಡಾಗದಂತೆ ನೋಡಿಕೊಳ್ಳಬೇಕು. ಸಮಿತಿ ವಾರಕ್ಕೊಮ್ಮೆ ಸಭೆ ನಡೆಸಿ ತಮ್ಮ ವ್ಯಾಪ್ತಿಯ ಸ್ಥಿತಿಗತಿ ಬಗ್ಗೆ ಚರ್ಚೆ ನಡೆಸಬೇಕು’ ಎಂದು ಮಾರ್ಗಸೂಚಿಯಲ್ಲಿ ವಿವರಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.