ADVERTISEMENT

ವಾರ್ಡ್‌ ಸಮಿತಿ ಸಭೆ: ಸಮಸ್ಯೆಗಳ ಸಾಲು

​ಪ್ರಜಾವಾಣಿ ವಾರ್ತೆ
Published 6 ಜುಲೈ 2019, 19:30 IST
Last Updated 6 ಜುಲೈ 2019, 19:30 IST
ದೊಮ್ಮಲೂರು ವಾರ್ಡ್‌ನಲ್ಲಿ ನಡೆದ ವಾರ್ಡ್‌ ಸಮಿತಿ ಸಭೆಯಲ್ಲಿ ಪಾಲ್ಗೊಂಡಿದ್ದ ಸ್ಥಳೀಯರು
ದೊಮ್ಮಲೂರು ವಾರ್ಡ್‌ನಲ್ಲಿ ನಡೆದ ವಾರ್ಡ್‌ ಸಮಿತಿ ಸಭೆಯಲ್ಲಿ ಪಾಲ್ಗೊಂಡಿದ್ದ ಸ್ಥಳೀಯರು   

ಬೆಂಗಳೂರು: ಬಿಬಿಎಂಪಿಯ ಹಲವು ವಾರ್ಡ್‌ಗಳಲ್ಲಿ ವಾರ್ಡ್ ಸಮಿತಿ ಸಭೆ ಶನಿವಾರ ನಡೆಯಿತು. ಪಾಲಿಕೆ ಸದಸ್ಯರ ಸಮ್ಮುಖದಲ್ಲಿಯೇ ವಾರ್ಡ್‌ನಲ್ಲಿ ಇರುವ ಸಮಸ್ಯೆಗಳ ಬಗ್ಗೆ ಸ್ಥಳೀಯರು ಧ್ವನಿ ಎತ್ತಿದರು.

ಬೇಗೂರು ವಾರ್ಡ್‌ನಲ್ಲಿ ಶನಿವಾರ ನಡೆದ ಸಭೆಯಲ್ಲಿ ಹಲವರು ಇದೇ ಮೊದಲ ಬಾರಿಗೆ ಪಾಲ್ಗೊಂಡಿದ್ದರು. ಅಪಾರ್ಟ್‌ಮೆಂಟ್‌ ಸಮುಚ್ಚಯಗಳಲ್ಲಿನ ಕಸದ ಸಮಸ್ಯೆ ಪ್ರಮುಖವಾಗಿ ಚರ್ಚೆಗೆ ಬಂದಿತು.

ಕಸ ವಿಲೇವಾರಿ ಸಮಸ್ಯೆಯನ್ನು ಪಾಲಿಕೆ ಸದಸ್ಯರ ಗಮನಕ್ಕೆ ತರಲಾಯಿತು. ಗುತ್ತಿಗೆದಾರರನ್ನು ಸ್ಥಳಕ್ಕೆ ಕರೆಸಿದ ಪಾಲಿಕೆ ಸದಸ್ಯ, 24 ಗಂಟೆಯೊಳಗೆ ಸಮಸ್ಯೆ ಬಗೆಹರಿಸಲು ಸೂಚಿಸಿದರು.

ADVERTISEMENT

ಬೀದಿ ಬದಿಯಲ್ಲಿಯೇ ವರ್ತಕರು ವ್ಯಾಪಾರದಲ್ಲಿ ತೊಡಗಿರುವುದರಿಂದ ರಸ್ತೆ ಇಕ್ಕಟ್ಟಾಗಿದ್ದು, ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಮಹಿಳೆಯೊಬ್ಬರು ದೂರಿದರು.

ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಸಭೆಯಲ್ಲಿ ಪಾಲ್ಗೊಂಡು ತಮ್ಮ ವಾರ್ಡ್‌ನಲ್ಲಿನ ಸಮಸ್ಯೆಯನ್ನು ಗಮನಕ್ಕೆ ತಂದರು.

ಹೆಮ್ಮಿಗೆಪುರ ವಾರ್ಡ್‌ನಲ್ಲಿಯೂ ಸಭೆ ನಡೆಯಿತು.ಬಿನ್ನಿಪೇಟೆ, ಪುಲಿಕೇಶಿನಗರ, ದೊಮ್ಮಲೂರು ವಾರ್ಡ್‌ ಸೇರಿದಂತೆ ಹಲವು ವಾರ್ಡ್‌ಗಳಲ್ಲಿ ಸಭೆ ನಡೆಯಿತು. ಸ್ಥಳೀಯರು, ಪಾಲಿಕೆ ಸದಸ್ಯರು, ಸಂಘ–ಸಂಸ್ಥೆಗಳ ಸದಸ್ಯರು, ವಾರ್ಡ್ ಸಮಿತಿ ಸದಸ್ಯರು ಸಭೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.