ಬೆಂಗಳೂರು: ಬಿಬಿಎಂಪಿ ವಾರ್ಡ್‌ಗಳ ಮರುವಿಂಗಡಣೆಗೆ ಸರ್ಕಾರ ಪುನರ್‌ರಚಿಸಿರುವ ಸಮಿತಿಯ ಪ್ರಥಮ ಸಭೆ ಬುಧವಾರ ನಡೆಯಿತು.
ಸರ್ಕಾರ ನೀಡಿರುವ ಆದೇಶ ಹಾಗೂ 12 ವಾರಗಳಲ್ಲಿ ಹೊಸದಾಗಿ ವಾರ್ಡ್‌ಗಳನ್ನು ಮರುವಿಂಗಡಿಸುವ ಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.
ಬಿಬಿಎಂಪಿ ಮುಖ್ಯ ಆಯುಕ್ತರ ಅಧ್ಯಕ್ಷತೆಯಲ್ಲಿ ಬಿಡಿಎ ಆಯುಕ್ತ, ಬೆಂಗಳೂರು ನಗರ ಜಿಲ್ಲಾಧಿಕಾರಿ ಅವರ ಸಮಿತಿಯನ್ನು ಸರ್ಕಾರ ಜೂನ್ 23ರಂದು ಪುನರ್ ರಚಿಸಿತ್ತು. ಬಿಬಿಎಂಪಿ ಕಾಯ್ದೆ ಪ್ರಕಾರ, 250 ವಾರ್ಡ್, 15 ವಲಯಗಳನ್ನು ರಚಿಸಬಹುದಾಗಿದೆ. 243 ವಾರ್ಡ್‌ಗಳನ್ನು ಹೆಚ್ಚಿಸುವ ಬಗ್ಗೆ ಪ್ರಥಮ ಸಭೆಯಲ್ಲಿ ಚರ್ಚೆಯಾಗಿಲ್ಲ ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.