ತ್ಯಾಜ್ಯ (ಪ್ರಾತಿನಿಧಿಕ ಚಿತ್ರ)
ಬೆಂಗಳೂರು: ಖಾಲಿ ನಿವೇಶನಗಳಿಗೆ ತ್ಯಾಜ್ಯ ನಿರ್ವಹಣಾ ಬಳಕೆದಾರರ ಶುಲ್ಕದಿಂದ ಸಂಪೂರ್ಣ ವಿನಾಯಿತಿ ನೀಡಬೇಕು ಎಂದು ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಆರ್. ಮಂಜುನಾಥ ಅವರು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಪತ್ರ ಬರೆದಿರುವ ಅವರು, ‘ದಾಸರಹಳ್ಳಿ ವಿಧಾನಸಭೆ ಕ್ಷೇತ್ರವು 2008–09ನೇ ಸಾಲಿನಿಂದ ಬಿಬಿಎಂಪಿ ವ್ಯಾಪ್ತಿಗೆ ಒಳಪಟ್ಟಿದೆ. ಬಿಬಿಎಂಪಿ 18 ವರ್ಷಗಳಿಂದ ಕಸ ಸಂಗ್ರಹಣೆ ಮಾಡಿ, ಅದಕ್ಕೆ ಸೆಸ್ ಸಂಗ್ರಹಿಸುತ್ತಿದೆ. ಈಗ ಬಳಕೆದಾರರ ಶುಲ್ಕವನ್ನೂ ಪಾವತಿಸಲು ತಂತ್ರಾಂಶದಲ್ಲಿ ಸೇರಿಸಿ, ಆಸ್ತಿ ತೆರಿಗೆಯಲ್ಲೇ ಅದನ್ನು ಪಾವತಿಸಲು ಸೂಚಿಸಲಾಗಿದೆ. ಶುಲ್ಕದ ಪ್ರಮಾಣವನ್ನು ತಗ್ಗಿಸಲು ಕ್ರಮ ಕೈಗೊಳ್ಳಬೇಕು, ನಾಗರಿಕರ ಮೇಲಿನ ಹೊರೆಯನ್ನು ಕಡಿಮೆ ಮಾಡಬೇಕು’ ಎಂದು ಕೋರಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.