
ಪ್ರಜಾವಾಣಿ ವಾರ್ತೆಬೆಂಗಳೂರು: ಜಲಮಂಡಳಿಯು ವಿವಿಧ ಉಪವಿಭಾಗಗಳಲ್ಲಿ ಗುರುವಾರ (ಏ.1) ಬೆಳಿಗ್ಗೆ 9.30ರಿಂದ 11ರವರೆಗೆ ನೀರಿನ ಅದಾಲತ್ ಹಮ್ಮಿಕೊಳ್ಳಲಾಗಿದೆ.
ನೀರಿನ ಬಿಲ್, ನೀರು ಮತ್ತು ಒಳಚರಂಡಿ ಸಂಪರ್ಕ ಕಲ್ಪಿಸುವಲ್ಲಿನ ವಿಳಂಬ, ಗೃಹ ಬಳಕೆಯಿಂದ ವಾಣಿಜ್ಯ ಬಳಕೆ ಪರಿವರ್ತನೆ ವಿಳಂಬ ಮತ್ತಿತರ ಕುಂದು ಕೊರತೆಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಅದಾಲತ್‌ನಲ್ಲಿ ಪರಿಹರಿಸಲಾಗುವುದು. ಬಳಕೆದಾರರು ಸಂಬಂಧಪಟ್ಟ ಉಪವಿಭಾಗದ ಕಚೇರಿಗೆ ತೆರಳಿ ಅದಾಲತ್‌ನಲ್ಲಿ ಪಾಲ್ಗೊಳ್ಳಬಹುದು.
ಕುಂದು ಕೊರತೆಗಳಿಗೆ ಸಂಬಂಧಿಸಿದಂತೆ ದಿನದ 24 ಗಂಟೆ ಕಾರ್ಯಾಚರಿಸುವ ದೂರು ನಿರ್ವಹಣಾ ಕೇಂದ್ರದ ದೂರವಾಣಿ ಸಂಖ್ಯೆ:080– 22238888, ಸಹಾಯವಾಣಿ 1916 ಹಾಗೂ ವಾಟ್ಸ್‌ಆ್ಯಪ್ ಸಂಖ್ಯೆ:8762228888 ಸಂಪರ್ಕಿಸಬಹುದು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.