ADVERTISEMENT

ಜಲಮಂಡಳಿ: ಫೋನ್‌–ಇನ್‌ ಇಂದು

​ಪ್ರಜಾವಾಣಿ ವಾರ್ತೆ
Published 11 ಜುಲೈ 2025, 0:58 IST
Last Updated 11 ಜುಲೈ 2025, 0:58 IST
   

ಬೆಂಗಳೂರು: ಜಲಮಂಡಳಿ ಅಧ್ಯಕ್ಷ ವಿ.ರಾಮ್‌ಪ್ರಸಾತ್‌ ಮನೋಹರ್ ಅವರು ಇದೇ 11ರಂದು (ಶುಕ್ರವಾರ) ಬೆಳಿಗ್ಗೆ 9.30ರಿಂದ 10.30ರವರೆಗೆ ಫೋನ್‌–ಇನ್ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.

ಸಾರ್ವಜನಿಕರು ವಲಯ/ ಪ್ರದೇಶಗಳಲ್ಲಿನ ಕುಡಿಯುವ ನೀರಿನ ಸಮಸ್ಯೆ ಮತ್ತು ಒಳಚರಂಡಿ ಕೊಳವೆ, ಇಳಿ ಗುಂಡಿಯಿಂದ ತ್ಯಾಜ್ಯ ನೀರು ಹೊರಬರುತ್ತಿರುವ ಬಗ್ಗೆ, ಜಲಮಾಪನ ಹಾಗೂ ನೀರಿನ ಬಿಲ್‌ಗೆ ಸಂಬಂಧಿಸಿದ ಸಮಸ್ಯೆಯ ಬಗ್ಗೆ ಮಾತನಾಡಿ ಪರಿಹಾರ ಪಡೆದುಕೊಳ್ಳಬಹುದು.

ನೀರಿನ ಸಂಪರ್ಕ ಹೊಂದಿರುವ ಗ್ರಾಹಕರು ತಮ್ಮ ಆರ್.ಆರ್.ಸಂಖ್ಯೆಯನ್ನು ತಿಳಿಸಿ ದೂರು ನೀಡಬಹುದು ಎಂದು ಜಲಮಂಡಳಿ ಪ್ರಕಟಣೆ ತಿಳಿಸಿದೆ.

ADVERTISEMENT

ದೂರವಾಣಿ ಸಂಖ್ಯೆ: 080-22945119, 080-22229639.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.