ಬೆಂಗಳೂರು: ನಗರದಲ್ಲಿ ನೀರಿನ ಕೊರತೆಗೆ ಪರಿಹಾರ ಕಂಡುಕೊಳ್ಳುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸೋಮವಾರ ಉನ್ನತ ಮಟ್ಟದ ಸಭೆ ನಡೆಯಲಿದೆ.
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮತ್ತು ಬೆಂಗಳೂರು ಜಲಮಂಡಳಿ ಅಧ್ಯಕ್ಷ ರಾಮಪ್ರಸಾತ್ ಮನೋಹರ್ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.