ಯಲಹಂಕ: ಬ್ಯಾಟರಾಯನಪುರ ಕ್ಷೇತ್ರದ ಕೊಡಿಗೇಹಳ್ಳಿಯ ಸರ್.ಎಂ.ವಿಶ್ವೇಶ್ವರಯ್ಯ ಬಡಾವಣೆ ಹಾಗೂ ಥಣಿಸಂದ್ರ ವಾರ್ಡ್ ವ್ಯಾಪ್ತಿಯ ನಾಗವಾರದ ಮಂಜುನಾಥ ಬಡಾವಣೆಯಲ್ಲಿ ₹5.50 ಕೋಟಿ ವೆಚ್ಚದಲ್ಲಿ ಚರಂಡಿ ಮತ್ತು ರಸ್ತೆ ಅಭಿವೃದ್ಧಿ ಕಾಮಗಾರಿಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ನಾಗವಾರದ ಮಂಜುನಾಥ ಬಡಾವಣೆಯಲ್ಲಿ ಪ್ರತಿ ಬಾರಿ ಮಳೆ ಬಂದ ಸಂದರ್ಭದಲ್ಲಿ ಇಲ್ಲಿನ ರಸ್ತೆಗಳು ಜಲಾವೃತವಾಗಿ ಮನೆಗಳಿಗೆ ನೀರು ನುಗ್ಗಿ, ಜನರು ತೊಂದರೆ ಅನುಭವಿಸುತ್ತಿದ್ದರು. ಸಮಸ್ಯೆ ಬಗೆಹರಿಸಬೇಕೆಂಬ ಸ್ಥಳೀಯರ ಮನವಿಯ ಮೇರೆಗೆ ರಸ್ತೆಗಳನ್ನು ಎತ್ತರಿಸಿ, ನೂತನವಾಗಿ ಚರಂಡಿ ನಿರ್ಮಿಸಿ, ಒಟ್ಟು 10 ರಸ್ತೆಗಳಿಗೆ ಕಾಂಕ್ರೀಟ್ ಹಾಕಿ ಅಭಿವೃದ್ಧಿಪಡಿಸುವ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.