
ಪ್ರಜಾವಾಣಿ ವಾರ್ತೆಬೆಂಗಳೂರು: ನಗರ ಜಿಲ್ಲೆಯಲ್ಲಿ ಗ್ರಾಮೀಣ ನೀರು ಸರಬರಾಜು ಮತ್ತು ನೈರ್ಮಲ್ಯ ಕಾಮಗಾರಿಗಳನ್ನು ಪರಿಣಾಮಕಾರಿಯಾಗಿ ನಿಗದಿತ ಅವಧಿಯೊಳಗೆ ಅನುಷ್ಠಾನಗೊಳಿಸಲು ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸಿ. ಮುನಿರಾಜು ಅವರು ಅಧಿಕಾರಿಗಳಿಗೆ ಸೂಚಿಸಿದರು.
ನಗರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಗ್ರಾಮೀಣ ಕುಡಿಯುವ ನೀರು ಯೋಜನೆಯ ಕ್ರಿಯಾ ಯೋಜನೆ ರೂಪಿಸುವ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಯೋಜನೆಯು ಯಶಸ್ವಿಯಾಗಲು ಅಧಿಕಾರಿಗಳು ಶ್ರಮವಹಿಸಿ ಕೆಲಸ ಮಾಡಬೇಕು. ಕುಡಿಯುವ ನೀರು ಪೂರೈಕೆಗೆ ತೊಂದರೆಯಾಗದಂತೆ ತ್ವರಿತಗತಿಯಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸಲು ಪ್ರಯತ್ನಿಸಬೇಕು ಎಂದು ಸೂಚಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.