ADVERTISEMENT

ಬೆಂಗಳೂರು: ಇಂದು ನೀರು ಸರಬರಾಜಿನಲ್ಲಿ ವ್ಯತ್ಯಯ

​ಪ್ರಜಾವಾಣಿ ವಾರ್ತೆ
Published 16 ಡಿಸೆಂಬರ್ 2025, 23:30 IST
Last Updated 16 ಡಿಸೆಂಬರ್ 2025, 23:30 IST
<div class="paragraphs"><p>ನೀರು</p></div>

ನೀರು

   

ಬೆಂಗಳೂರು: ಕಾವೇರಿ 5ನೇ ಹಂತದ ನೀರು ಸರಬರಾಜು ಯೋಜನೆಯಲ್ಲಿ ಸೋರಿಕೆ ಕಂಡುಬಂದಿರುವ ಕಾರಣ ತುರ್ತು ದುರಸ್ಥಿಗೆ ಬೆಂಗಳೂರು ಜಲಮಂಡಳಿ ಮುಂದಾಗಿದೆ. ಇದರಿಂದ ಬುಧವಾರ( ಡಿ.17) ನಗರದ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಜಲಮಂಡಳಿ ಅಧ್ಯಕ್ಷ ಡಾ.ವಿ.ರಾಮ್ ಪ್ರಸಾತ್ ಮನೋಹರ್ ತಿಳಿಸಿದ್ದಾರೆ.

ಕಾವೇರಿ 5ನೇ ಹಂತದ 3 ಸಾವಿರ ಎಂಎಂ ವ್ಯಾಸದ ಪೈಪ್‌ಲೈನ್‌ಗೆ ಹಾನಿಯಾಗಿ ಸೋರಿಕೆಯಾಗುತ್ತಿದೆ. ದುರಸ್ಥಿ ಕಾಮಗಾರಿ ಕೈಗೊಂಡಿರುವ ಕಾರಣ ಬೆಳಿಗ್ಗೆ 7ರಿಂದ ರಾತ್ರಿ 10ರವರೆಗೆ ನೀರು ಸರಬರಾಜು ಇರುವುದಿಲ್ಲ ಎಂದು ತಿಳಿಸಿದ್ಧಾರೆ.

ADVERTISEMENT

ಅನಂತಪುರ, ದೊಡ್ಡಬೆಟ್ಟಹಳ್ಳಿ, ಚಿಕ್ಕಬೆಟ್ಟಹಳ್ಳಿ ಹಾರೋಹಳ್ಳಿ, ಕೆಂಚನಹಳ್ಳಿ, ಗೋವಿಂದಪುರ, ವಾಸುದೇವಪುರ, ಮಂಚೇನಹಳ್ಳಿ, ಕಟ್ಟಿಗೇನಹಳ್ಳಿ, ಶ್ರೀನಿವಾಸಪುರ, ಬೆಳ್ಳಳ್ಳಿ, ತಿರುಮೆನಹಳ್ಳಿ, ಚೊಕ್ಕನಹಳ್ಳಿ, ದಾಸರಹಳ್ಳಿ, ರಾಚೇನಹಳ್ಳಿ, ಥಣಿಸಂದ್ರ, ಹೊರಮಾವು, ಅಗರ, ಅಮಾನಿ ಭೈರತಿಖಾನೆ, ಗೆದ್ದಲಹಳ್ಳಿ, ಕೊತ್ತನೂರು ನಾರಾಯಣಪುರ, ಕೊತ್ತನೂರು, ಎನ್ ನಾಗೇನಹಳ್ಳಿ, ಕೈಲಾಸನಹಳ್ಳಿ, ಬೈರತಿ, ಬಿಳಿಶಿವಹಳ್ಳಿ, ಬಳಗೆರೆ, ಬೆಳ್ಳಂದೂರು ಅಮಾನಿಕೆರೆ, ಬೆಳತ್ತೂರು, ಚನ್ನಸಂದ್ರ, ದೇವರಬೀಸನಹಳ್ಳಿಯಲ್ಲಿ ನೀರಿನ ವ್ಯತ್ಯಯವಾಗಲಿದೆ.

ಗುಂಜೂರು, ಅಗದೂರು, ಕಾಡಬೀಸನಹಳ್ಳಿ, ಕಾಯಮ್ಮನ ಅಗ್ರಹಾರ, ಕುಂಬೇನ ಅಗ್ರಹಾರ, ನಾಗೋಂಡಹಳ್ಳಿ, ಪಣತ್ತೂರು, ರಾಮಗೊಂಡನಹಳ್ಳಿ, ಸಿದ್ದಾಪುರ, ಸೋರಹುಣಸೆ, ತುಬರಹಳ್ಳಿ, ವರ್ತೂರು, ಕಲ್ಕರೆ, ಹೊರಮಾವು. ಕೆ.ಚನ್ನಸಂದ್ರ, ವಾರಣಾಸಿ, ವಸಂತಪುರ, ಉಲ್ಲಾಳ ಸೋಣ್ಣೆನಹಳ್ಳಿ, ಗಾಣಾಕಲ್ಲು, ಹೆಮ್ಮಿಗೆಪುರ, ಸೋಮಪುರ, ವಾರಸಂದ್ರ, ಲಿಂಗದೀರನಹಳ್ಳಿ, ಹೊಸಹಳ್ಳಿ, ಅರೇಹಳ್ಳಿ, ವಡ್ಡರಪಾಳ್ಯ ಉತ್ತರಹಳ್ಳಿ, ಸುಬ್ರಮಣ್ಯಪುರದಲ್ಲಿ ನೀರಿನ ಪೂರೈಕೆ ಇರುವುದಿಲ್ಲ.

ಗುಬ್ಬಲಾಳ, ತುರಹಳ್ಳಿ, ಗಿಡದಕೋನೆನಹಳ್ಳಿ, ಆಲಹಳ್ಳಿ, ಅಂಬಲಿಪುರ, ಅಂಜನಾಪುರ, ಬಸಪುರ, ಬಸವನಪುರ, ಬೇಗೂರು, ಬೆಳ್ಳಂದೂರು, ಚಂದ್ರಶೇಖರಪುರ, ದೊಡ್ಡಕಲ್ಲಸಂದ್ರ, ಗೊಲ್ಲಹಳ್ಳಿ, ಗೊಟ್ಟಿಗೆರೆ, ಅರಳೂರು ಜುನಸಂದ್ರ, ಕೈಕೊಂಡನಹಳ್ಳಿ, ಕಾಳೇನ ಅಗ್ರಹಾರ, ಕಂಬತ್ತಹಳ್ಳಿ, ಕಮ್ಮನಹಳ್ಳಿ, ಕಸವನಹಳ್ಳಿ, ಕೂಡಲು, ಪರಪ್ಪನ ಅಗ್ರಹಾರ, ಪಿಳ್ಳಗಾನಹಳ್ಳಿ, ರಘುವನಹಳ್ಳಿ, ತಲಘಟ್ಟಪುರ, ತಿಪ್ಪಸಂದ್ರ, ವಾಜರಹಳ್ಳಿ, ಯಲೇನಹಳ್ಳಿ, ಭರತೇನ ಅಗ್ರಹಾರ, ಬೋಗನಹಳ್ಳಿ, ಚಿಕ್ಕಬೆಳ್ಳಂದೂರು, ಚಿಕ್ಕತೇಗೂರು, ದೊಡ್ಡಕನ್ನಹಳ್ಳಿ, ದೊಡ್ಡತೆಗೂರು, ನಾಗನಾಥಪುರ, ಅಬ್ಬಿಗೆರೆ, ಚಿಕ್ಕಸಂದ್ರ, ಶೆಟ್ಟಹಳ್ಳಿ, ಕರಿಹೋಬನಹಳ್ಳಿ, ಅಂಧರಹಳ್ಳಿ, ಮ್ಯಾಡರಹಳ್ಳಿ, ದೊಡ್ಡಬಿದರಕಲ್ಲು, ಲಿಂಗಧೀರನಹಳ್ಳಿ ಬಿ, ಹೆರೋಹಳ್ಳಿ, ಹೊಸಹಳ್ಳಿಯಲ್ಲಿ ನೀರಿನ ವ್ಯತ್ಯಯ ಉಂಟಾಗಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.