ಬೆಂಗಳೂರು: ಕಾವೇರಿ 1 ಮತ್ತು 2ನೇ ಹಂತದ ನೀರು ಪೂರೈಕೆಯಾಗುವ ಪ್ರದೇಶಗಳಲ್ಲಿ ಇದೇ 14 ಮತ್ತು 15ರಂದು ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ಟಿ.ಕೆ. ಹಳ್ಳಿ, ಹಾರೋಹಳ್ಳಿ ಮತ್ತು ತಾತಗುಣಿಯಲ್ಲಿನ ಕಾವೇರಿ 1 ಮತ್ತು 2ನೇ ಹಂತದ ಜಲರೇಚಕ ಯಂತ್ರಗಾರ ದುರಸ್ತಿ ಕಾಮಗಾರಿ ಕೈಗೊಳ್ಳಲಾಗಿದೆ. ಆದ್ದರಿಂದ ನಗರದ ವಿವಿಧ ಪ್ರದೇಶಗಳಲ್ಲಿ ಕಾವೇರಿ
ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.