ADVERTISEMENT

ಸ್ಥಗಿತಗೊಂಡ ಶುದ್ಧ ನೀರಿನ ಘಟಕ

​ಪ್ರಜಾವಾಣಿ ವಾರ್ತೆ
Published 14 ಮಾರ್ಚ್ 2019, 20:05 IST
Last Updated 14 ಮಾರ್ಚ್ 2019, 20:05 IST
ಸ್ಥಗಿತಗೊಂಡ ಶುದ್ಧ ನೀರಿನ ಘಟಕ
ಸ್ಥಗಿತಗೊಂಡ ಶುದ್ಧ ನೀರಿನ ಘಟಕ   

ಹೆಸರಘಟ್ಟ: ಚಿಕ್ಕಬಾಣಾವರ ಗ್ರಾಮದ ದ್ವಾರಕಾ ನಗರದ ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂದೆ ಇರುವ ಶುದ್ಧ ನೀರಿನ ಘಟಕವು ಒಂದು ತಿಂಗಳಿನಿಂದ ಸ್ಥಗಿತಗೊಂಡಿದೆ.

‘ದ್ವಾರಕಾ ನಗರದಲ್ಲಿ ಸುಮಾರು 150 ಮನೆಗಳಿವೆ. ಎಲ್ಲರೂ ಕುಡಿಯುವ ನೀರಿಗಾಗಿ ಈ ಘಟಕವನ್ನೇ ಅವಲಂಬಿಸಿದ್ದಾರೆ. ಈ ಘಟಕವನ್ನು ಬಿಟ್ಟರೆ ಸ್ಥಳೀಯರು ನೀರಿಗಾಗಿ ಮಾರುತಿ ನಗರ, ಇಲ್ಲವೇ ಕೆಂಪಾಪುರ ರಸ್ತೆಯಲ್ಲಿರುವ ಘಟಕದಿಂದ ನೀರನ್ನು ತೆಗೆದುಕೊಂಡು ಬರಬೇಕು. ದ್ವಿಚಕ್ರ ವಾಹನ ಉಳ್ಳವರು ಸಲೀಸಾಗಿ ತರುತ್ತಾರೆ. ಇಲ್ಲದವರು ನೀರಿಗಾಗಿ ಪರದಾಡಬೇಕಿದೆ’ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.

‘ಪಂಚಾಯಿತಿ ಸದಸ್ಯರು ಇದುವರೆಗೆ ಗ್ರಾಮಸ್ಥರ ಸಮಸ್ಯೆಗಳ ಬಗ್ಗೆ ಕಾಳಜಿ ವಹಿಸಿಲ್ಲ. ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಯಾವ ಕ್ರಮವನ್ನು ತೆಗೆದುಕೊಂಡಿಲ್ಲ’ ಎಂದು ಗ್ರಾಮದ ನಿವಾಸಿ ಮಹೇಂದ್ರ ಅಸಮಾಧಾನ ವ್ಯಕ್ತಪಡಿಸಿದರು.

ADVERTISEMENT

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಮಕೃಷ್ಣ ಅವರು ಪ್ರತಿಕ್ರಿಯಿಸಿ, ‘ನೀರಿನ ನಿರ್ವಹಣೆ ಬಗ್ಗೆ ಚರ್ಚೆ ಮಾಡುತ್ತಿದ್ದು, ಶೀಘ್ರದಲ್ಲಿ ಈ ಸಮಸ್ಯೆಯನ್ನು ಬಗೆಹರಿಸುತ್ತೇವೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.