ಬೆಂಗಳೂರು: ಎಲ್ಲ 198 ವಾರ್ಡ್‌ಗಳಲ್ಲೂ ಕೋವಿಡ್ ಚಿಕಿತ್ಸೆಯ ಸರದಿ ನಿರ್ಧಾರದ ವಿಕೇಂದ್ರಿತ ವ್ಯವಸ್ಥೆ ಮತ್ತು ತುರ್ತು ಸ್ಪಂದನೆಯ ವಾರ್ಡ್ ಮಟ್ಟದ ಸಮಿತಿಗಳನ್ನು (ಡಬ್ಲ್ಯುಡಿಸಿ) ಬಿಬಿಎಂಪಿ ರಚಿಸಿದೆ. ಈ ಸಮಿತಿಗಳ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುವ ನೋಡಲ್ ಅಧಿಕಾರಿಗಳನ್ನು ನೇಮಿಸಿ ಪಾಲಿಕೆಯ ಮುಖ್ಯ ಆಯುಕ್ತ ಗೌರವ್ ಗುಪ್ತ ಅವರು ಬುಧವಾರ ಆದೇಶ ಹೊರಡಿಸಿದ್ದಾರೆ.
ವಾರ್ಡ್ ಮಟ್ಟದಲ್ಲಿ ಕೋವಿಡ್ ನಿಯಂತ್ರಣ ಕ್ರಮಗಳ ಕಟ್ಟುನಿಟ್ಟಿನ ಜಾರಿಗೆ ಈ ಸಮಿತಿ ಶ್ರಮಿಸಲಿದೆ. ಕೋವಿಡ್ ನಿಯಂತ್ರಣಕ್ಕೆ ತಳಮಟ್ಟದಲ್ಲಿ ಕ್ರಮ ಕೈಗೊಳ್ಳುವುದು ಹಾಗೂ ನಿಯಮಿತವಾಗಿ ಸಭೆ ನಡೆಸುವುದು ನೋಡಲ್ ಅಧಿಕಾರಿಯ ಜವಾಬ್ದಾರಿ. ಸಭೆಗೆ ಮುನ್ನವೇ ಸಾರ್ವಜನಿಕರಿಗೆ ಈ ಬಗ್ಗೆ ಮಾಹಿತಿ ಒದಗಿಸುವುದು, ಸಭೆಯ ನಡಾವಳಿಗಳನ್ನು ಪಾಲಿಕೆಯ ವೆಬ್‌ಸೈಟ್‌ನಲ್ಲಿ ಲಭ್ಯವಾಗುವಂತೆ ನೋಡಿಕೊಳ್ಳುವುದು ಸದಸ್ಯ ಕಾರ್ಯದರ್ಶಿಯ ಜವಾಬ್ದಾರಿ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.