ADVERTISEMENT

ಪೌರತ್ವ ತಿದ್ದುಪಡಿ ಕಾಯ್ದೆ ಕುರಿತ ಚರ್ಚೆಗೆ ನಾವು ಸಿದ್ಧ: ಸಿ.ಟಿ.ರವಿ

​ಪ್ರಜಾವಾಣಿ ವಾರ್ತೆ
Published 20 ಡಿಸೆಂಬರ್ 2019, 4:59 IST
Last Updated 20 ಡಿಸೆಂಬರ್ 2019, 4:59 IST
ಸಿ.ಟಿ.ರವಿ
ಸಿ.ಟಿ.ರವಿ   

ಬೆಂಗಳೂರು: ‘ಚರ್ಚೆಗೆ ನಾವು ಸಿದ್ಧರಿದ್ದೇವೆ. ಚಳವಳಿಗಳನ್ನು ಹತ್ತಿಕ್ಕುವುದಿಲ್ಲ. ಆದರೆ ಹಿಂಸಾಚಾರಕ್ಕೆ ನಮ್ಮ ಸರ್ಕಾರ ಅವಕಾಶಕೊಡುವುದಿಲ್ಲ’ ಎಂದು ಸಚಿವ ಸಿ.ಟಿ.ರವಿ ಹೇಳಿದರು.

ನಗರದಲ್ಲಿ ಇಂದು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಂವಿಧಾನದ ಪ್ರಕಾರ ಕಾಯ್ದೆ ಆಗೋದು ಬೀದಿ ಜಗಳದಲ್ಲಿ ಅಲ್ಲ. ಸಂಸತ್ತಿನಲ್ಲಿ ವಿಸ್ತೃತ ಚರ್ಚೆಯ ಮೂಲಕ ಕಾಯ್ದೆಗಳು ರೂಪುಗೊಳ್ಳುತ್ತವೆ. ಪೌರತ್ವ ತಿದ್ದುಪಡಿ ಕಾಯ್ದೆಯ ಮೂಲಕ ಭಾರತ ಮಾನವೀಯತೆ ಮೆರೆದಿದೆ’ ಎಂದು ವಿವರಿಸಿದರು.

‘ಈ ದೇಶದ ಯಾವುದೇ ವ್ಯಕ್ತಿಯ ಪೌರತ್ವವನ್ನು ಸರ್ಕಾರ ಕಿತ್ತುಕೊಂಡಿಲ್ಲ. ಭಾರತವನ್ನು ತನ್ನ ನೆಲ ಎಂದು ಆಯ್ಕೆ ಮಾಡಿಕೊಂಡಿರುವವರೆಲ್ಲರೂ ಭಾರತೀಯರೇ ಆಗಿದ್ದಾರೆ, ಆಗಿರುತ್ತಾರೆ’ ಎಂದು ಹೇಳಿದರು.

ADVERTISEMENT

‘ನಮ್ಮ ರಾಜ್ಯದಲ್ಲಿ ಕೆಲವರು ಪೌರತ್ವ ಕಿತ್ತುಕೊಂಡಿದೆ ಎಂದು ಇಲ್ಲದ ವಿಚಾರ ಮಾತನಾಡಿ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಯಾರ ಹಕ್ಕನ್ನೂ ನಾವು ಕಿತ್ತುಕೊಂಡಿಲ್ಲ. ಚರ್ಚೆಗೆ ನಾವು ತಯಾರಿದ್ದೇವೆ. ಚಳವಳಿಗಳಿಗೆ ಪ್ರಜಾಪ್ರಭುತ್ವದಲ್ಲಿ ಅವಕಾಶವಿದೆ. ಆದರೆ ಹಿಂಸಾಚಾರಕ್ಕೆ ಅಲ್ಲ’ ಎಂದು ಸ್ಪಷ್ಟಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.