ADVERTISEMENT

ಆಯುಧ ಪೂಜೆ: ರಾಸಾಯನಿಕ ಬಣ್ಣ ಬಳಸದಂತೆ ಸೂಚನೆ

ವಿಧಾನಸೌಧ ವ್ಯಾಪ್ತಿಯಲ್ಲಿ ಆಯುಧ ಪೂಜೆ

​ಪ್ರಜಾವಾಣಿ ವಾರ್ತೆ
Published 20 ಅಕ್ಟೋಬರ್ 2020, 21:15 IST
Last Updated 20 ಅಕ್ಟೋಬರ್ 2020, 21:15 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ರಾಜ್ಯದ ಆಡಳಿತ ಕೇಂದ್ರವಿರುವ ವಿಧಾನಸೌಧ, ವಿಕಾಸ ಸೌಧ ಮತ್ತು ಬಹುಮಹಡಿ ಕಟ್ಟಡಗಳಲ್ಲಿ ಆಯುಧ ಪೂಜೆಯ ಸಂದರ್ಭ ದಲ್ಲಿ ರಾಸಾಯನಿಕ ಬಣ್ಣಗಳನ್ನು ಬಳಸ ಬಾರದು ಎಂದು ಸೂಚಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸೋಮವಾರ ಸುತ್ತೋಲೆ ಹೊರಡಿಸಿದೆ.

ಕುಂಬಳಕಾಯಿ ಮತ್ತು ರಂಗೋಲಿಗಳಲ್ಲೂ ರಾಸಾಯನಿಕ ಬಣ್ಣ ಬಳಸುವಂತಿಲ್ಲ. ರಾಸಾಯನಿಕ ಮಿಶ್ರಿತ ಬಣ್ಣ, ಕುಂಕುಮ, ಅರಿಶಿನ, ಸುಣ್ಣ ಸೇರಿದಂತೆ ಯಾವುದೇ ವಸ್ತುಗಳನ್ನೂ ಬಳಕೆ ಮಾಡುವಂತಿಲ್ಲ ಎಂದು ಸುತ್ತೋಲೆಯಲ್ಲಿ ನೌಕರರಿಗೆ ಸೂಚಿಸಲಾಗಿದೆ.

‘ವಿಧಾನಸೌಧ, ವಿಕಾಸಸೌಧಗಳು ಪಾರಂಪರಿಕ ಕಟ್ಟಡಗಳಾಗಿವೆ. ರಾಸಾಯನಿಕ ಬಣ್ಣ ಬಳಕೆಯಿಂದ ಕಟ್ಟಡಗಳ ಸೌಂದರ್ಯಕ್ಕೆ ಧಕ್ಕೆಯಾಗುತ್ತಿದೆ’ ಎಂದು ತಿಳಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.