ADVERTISEMENT

ನಿವಾರ್: ಇಂದೂ ಮಳೆ ಸಾಧ್ಯತೆ

​ಪ್ರಜಾವಾಣಿ ವಾರ್ತೆ
Published 26 ನವೆಂಬರ್ 2020, 19:40 IST
Last Updated 26 ನವೆಂಬರ್ 2020, 19:40 IST

ಬೆಂಗಳೂರು: ‘ನಿವಾರ್’ ಚಂಡಮಾರುತದ ಪ್ರಭಾವದಿಂದ ಶುರುವಾಗಿರುವ ಮಳೆ ಬೆಂಗಳೂರಿನಲ್ಲಿ ಶುಕ್ರವಾರವೂ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿಂದ ಗುರುವಾರ ಯೆಲ್ಲೋ ಅಲರ್ಟ್ ಘೋಷಿಸಲಾಗಿತ್ತು.

‘ಚಂಡಮಾರುತವು ಪುದುಚೇರಿ ದಾಟಿದ ನಂತದ ದುರ್ಬಲಗೊಂಡಿರುವ ಕಾರಣ ತೀವ್ರತೆ ಕಡಿಯಾಗುವ ನಿರೀಕ್ಷೆ ಇದೆ. ಆದರೂ ದಕ್ಷಿಣ ಒಳನಾಡು, ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಶ್ರುಕ್ರವಾರ ಮಳೆಯಾಗಲಿದೆ’ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.