ADVERTISEMENT

ದಕ್ಷಿಣ ಒಳನಾಡಿನಲ್ಲಿ ಮಂಗಳವಾರ ಬಿರುಗಾಳಿ ಸಹಿತ ಮಳೆ ಸಾಧ್ಯತೆ

​ಪ್ರಜಾವಾಣಿ ವಾರ್ತೆ
Published 5 ಜೂನ್ 2023, 20:37 IST
Last Updated 5 ಜೂನ್ 2023, 20:37 IST
ಗುಡುಗು ಸಹಿತ ಮಳೆ
ಗುಡುಗು ಸಹಿತ ಮಳೆ   

ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡು ವ್ಯಾಪ್ತಿಯ ಜಿಲ್ಲೆಗಳಲ್ಲಿ ಮಂಗಳವಾರ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ಜತೆಗೆ, ಗಾಳಿಯು 30ರಿಂದ 40 ಕಿ.ಮೀ ವೇಗದಲ್ಲಿ ಬೀಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಉತ್ತರ ಒಳನಾಡು ಭಾಗದ ಕೆಲವು ಪ್ರದೇಶದಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂದು ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ಅಥವಾ ರಾತ್ರಿ ವೇಳೆಯಲ್ಲಿ ಕೆಲವು ಪ್ರದೇಶದಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಿದೆ.

ಸೋಮವಾರ ಬೆಳಿಗ್ಗೆ 8.30ಕ್ಕೆ ಅನ್ವಯಿಸಿದಂತೆ ಕಳೆದ 24 ಗಂಟೆಗಳಲ್ಲಿ ವಿಜಯಪುರದ ತಾಳಿಕೋಟೆ, ಬೆಳಗಾವಿ ಬೈಲಹೊಂಗಲದಲ್ಲಿ ತಲಾ 4 ಸೆಂ.ಮೀ, ವಿಜಯಪುರದ ಬಿ.ಬಾಗೇವಾಡಿ, ಉತ್ತರ ಕನ್ನಡದ ಶಿರಾಳಿ, ಕೊಪ್ಪಳದ ಮುನಿರಾಬಾದ್, ಬೀದರ್‌ನಲ್ಲಿ 2 ಸೆಂ.ಮೀ ಮಳೆಯಾಗಿದೆ. ಉತ್ತರ ಕನ್ನಡದ ಕಾರವಾರ, ಉಡುಪಿಯ ಸಿದ್ದಾಪುರ, ಬೀದರ್‌ನ ನಿಟ್ಟೂರು ಹಾಗೂ ರಾಜೇಶ್ವರ್‌, ಕಲಬುರಗಿಯ ಸೇಡಂ, ಗದಗ ನಗರಗುಂದ, ತುಮಕೂರಿನ ವೈ.ಎನ್‌.ಹೊಸಕೋಟೆಯಲ್ಲಿ ತಲಾ 1 ಸೆಂ.ಮೀ ಮಳೆ ಸುರಿದಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.