ಬೆಂಗಳೂರು: ರಾಜ್ಯದ ಬಹುತೇಕ ಕಡೆ ಬುಧವಾರ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂಬ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ, ‘ಯೆಲ್ಲೊ ಅಲರ್ಟ್’ ನೀಡಿದೆ.
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಗಾಳಿ ಸಹಿತ ಜೋರು ಮಳೆಯಾಗುವ ಸಾಧ್ಯತೆ ಇದೆ. ಬೆಳಗಾವಿ, ಬಾಗಲಕೋಟೆ, ಗದಗ, ಕಲಬುರಗಿ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಂಭವ ಇದೆ ಎಂದು ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಪ್ರತಿ ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದೆ ಎಂದು ತಿಳಿಸಿದೆ.
ಮಂಗಳವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಶಿವಮೊಗ್ಗ ಜಿಲ್ಲೆಯ ಆಗುಂಬೆಯಲ್ಲಿ 9 ಸೆಂ.ಮೀ, ವಿಜಯಪುರ ಜಿಲ್ಲೆಯ ಇಂಡಿಯಲ್ಲಿ 7 ಸೆಂ.ಮೀ. ಬೀದರ್ ಜಿಲ್ಲೆಯ ಔರಾದ್, ಭಾಲ್ಕಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ತಲಾ 6 ಸೆಂ.ಮೀ. ಮಳೆ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.