
ಪ್ರಜಾವಾಣಿ ವಾರ್ತೆ
ಬೆಂಗಳೂರು: ಉತ್ತರ ಒಳನಾಡಿನ ಕೆಲವೆಡೆ ಸೋಮವಾರ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಒಣ ಹವೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಇದೇ 19ರಿಂದ ಐದು ದಿನಗಳು ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಸಾಧಾರಣ, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಇದೇ 20ರಂದು ಗುಡುಗು ಸಹಿತ ಸಾಧಾರಣ ಮಳೆ ಆಗಬಹುದು ಎಂದು ಇಲಾಖೆ ಹೇಳಿದೆ.
ಭಾನುವಾರ ಕೊಪ್ಪಳದಲ್ಲಿ ಗರಿಷ್ಠ ಉಷ್ಣಾಂಶ (39.5 ಡಿಗ್ರಿ ಸೆಲ್ಸಿಯಸ್) ಹಾಗೂ ಶಿವಮೊಗ್ಗದಲ್ಲಿ ಕನಿಷ್ಠ ಉಷ್ಣಾಂಶ (19 ಡಿಗ್ರಿ ಸೆಲ್ಸಿಯಸ್ ) ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.