ADVERTISEMENT

ಮಳೆ: ಎರಡು ಜಿಲ್ಲೆಗೆ ಯೆಲ್ಲೊ ಅಲರ್ಟ್

​ಪ್ರಜಾವಾಣಿ ವಾರ್ತೆ
Published 8 ಅಕ್ಟೋಬರ್ 2023, 16:10 IST
Last Updated 8 ಅಕ್ಟೋಬರ್ 2023, 16:10 IST
   

ಬೆಂಗಳೂರು: ದಕ್ಷಿಣ ಒಳನಾಡಿನ ಕೊಡಗು ಹಾಗೂ ಚಾಮರಾಜನಗರ ಜಿಲ್ಲೆಯ ಒಂದೆರಡು ಕಡೆ ಸೋಮವಾರ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ, ಈ ಎರಡೂ ಜಿಲ್ಲೆಗೆ ‘ಯೆಲ್ಲೊ ಅಲರ್ಟ್’ ಘೋಷಿಸಿದೆ. 

ಕರಾವಳಿಯ ಕೆಲವು ಸ್ಥಳಗಳು, ದಕ್ಷಿಣ ಒಳನಾಡಿನ ಕೆಲವೆಡೆ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆ ಸಾಧಾರಣ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿಯ ಅವಧಿಯಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ. 

ಉತ್ತರ ಒಳನಾಡಿನ ವಿಜಯಪುರ, ಗದಗ, ರಾಯಚೂರು ಜಿಲ್ಲೆಯ ಒಂದೆರಡು ಕಡೆ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ 2 ರಿಂದ 3 ಡಿಗ್ರಿ ಸೆಲ್ಸಿಯಸ್ ಹೆಚ್ಚಳವಾಗುವ ಸಂಭವವಿದೆ. ದಕ್ಷಿಣ ಒಳನಾಡಿನ ಮಂಡ್ಯ, ಮೈಸೂರು, ಶಿವಮೊಗ್ಗ, ಚಿತ್ರದುರ್ಗ ಹಾಗೂ ಕರಾವಳಿಯ ಉಡುಪಿ, ಉತ್ತರ ಕನ್ನಡ ಜಿಲ್ಲೆಯ ಒಂದೆರಡು ಕಡೆ ಗರಿಷ್ಠ ಉಷ್ಣಾಂಶ ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ ಹೆಚ್ಚಳವಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ. 

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.