ADVERTISEMENT

ಗುಡುಗು ಸಹಿತ ಮಳೆ ಮುಂದುವರಿಕೆ

​ಪ್ರಜಾವಾಣಿ ವಾರ್ತೆ
Published 22 ಜುಲೈ 2022, 15:21 IST
Last Updated 22 ಜುಲೈ 2022, 15:21 IST

ಬೆಂಗಳೂರು: ಕರಾವಳಿ ಮತ್ತು ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳಲ್ಲಿ ಶನಿವಾರ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೋಲಾರ, ಮಂಡ್ಯ, ಮೈಸೂರು ಹಾಗೂ ರಾಮನಗರ ಜಿಲ್ಲೆಗಳ ಒಂದೆರಡು ಕಡೆ ಭಾರಿ ಮಳೆಯಾಗಲಿದೆ. ಉತ್ತರ ಒಳನಾಡಿನ ಕೆಲವು ಕಡೆ ಮಳೆಯಾಗುವ ಸಾಧ್ಯತೆಯಿದೆಎಂದು ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಸಲ ಗುಡುಗು ಸಹಿತ ಭಾರಿ ಮಳೆಯಾಗಲಿದೆ. ಮುಂದಿನ 48 ಗಂಟೆಗಳು ಹವಾಮಾನದಲ್ಲಿ ಗಮನಾರ್ಹವಾದ ಬದಲಾವಣೆಯಿಲ್ಲ ಎಂದುಇಲಾಖೆ ಹೇಳಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.