ADVERTISEMENT

ರಾಜ್ಯದ ಹಲವೆಡೆ ಮುಂದಿನ ಮೂರು ದಿನ ಗುಡುಗು ಸಹಿತ ಮಳೆ

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2023, 14:23 IST
Last Updated 21 ಸೆಪ್ಟೆಂಬರ್ 2023, 14:23 IST
   

ಬೆಂಗಳೂರು: ರಾಜ್ಯದ ಹಲವೆಡೆ ಮುಂದಿನ ಮೂರು ದಿನಗಳು ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಒಂದೆರಡು ಕಡೆ ಶುಕ್ರವಾರ ಭಾರಿ ಮಳೆಯಾಗಲಿದೆ. ಒಳನಾಡಿನ ಕೆಲವೆಡೆ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ಬಿರುಗಾಳಿಯ ವೇಗವು ಗಂಟೆಗೆ 30 ಕಿ.ಮೀ.ಯಿಂದ 40 ಕಿ.ಮೀ. ಇರುವ ಸಾಧ್ಯತೆಯಿದೆ. ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರುತ್ತದೆ. ಸಂಜೆ ಅಥವಾ ರಾತ್ರಿ ಅವಧಿಯಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ. 

ಮುಂದಿನ ಒಂದು ವಾರ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಹಾಗೂ ಉತ್ತರ ಒಳನಾಡಿನ ಕೆಲವೆಡೆ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. 

ADVERTISEMENT

ಗುರುವಾರ ಬೆಳಿಗ್ಗೆ 8.30ಕ್ಕೆ ಅನ್ವಯಿಸಿದಂತೆ ಹಿಂದಿನ 24 ಗಂಟೆಗಳ ಅವಧಿಯಲ್ಲಿ ರಾಜ್ಯದ ಕೆಲವೆಡೆ ಮಳೆಯಾಗಿದೆ. ಉತ್ತರ ಕನ್ನಡದ ಗೋಕರ್ಣದಲ್ಲಿ ಗರಿಷ್ಠ (5 ಸೆಂ.ಮೀ) ಮಳೆಯಾಗಿದೆ ಎಂದು ಇಲಾಖೆ ತಿಳಿಸಿದೆ.  

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.