ADVERTISEMENT

ರಾಜ್ಯದ ಕರಾವಳಿ ಭಾಗದಲ್ಲಿ ಭಾರಿ ಮಳೆ ಸಾಧ್ಯತೆ

​ಪ್ರಜಾವಾಣಿ ವಾರ್ತೆ
Published 20 ಸೆಪ್ಟೆಂಬರ್ 2023, 15:53 IST
Last Updated 20 ಸೆಪ್ಟೆಂಬರ್ 2023, 15:53 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಬೆಂಗಳೂರು: ಕರಾವಳಿಯ ಎಲ್ಲಾ ಜಿಲ್ಲೆಗಳ ಒಂದೆರಡು ಕಡೆ ಗುರುವಾರ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. 

ದಕ್ಷಿಣ ಕನ್ನಡ ಜಿಲ್ಲೆಗೆ ‘ಯೆಲ್ಲೊ ಅಲರ್ಟ್’ ನೀಡಲಾಗಿದ್ದು, ದಕ್ಷಿಣ ಒಳನಾಡಿನ ಹಲವು ಕಡೆ ಹಾಗೂ ಉತ್ತರ ಒಳನಾಡಿನ ಕೆಲವು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಒಳನಾಡಿನಲ್ಲಿ ಬಿರುಗಾಳಿಯ ವೇಗವು ಗಂಟೆಗೆ 30 ಕಿ.ಮೀ.ಯಿಂದ 40 ಕಿ.ಮೀ. ಇರಲಿದೆ. ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರುತ್ತದೆ. ಸಂಜೆ ಅಥವಾ ರಾತ್ರಿ ಅವಧಿಯಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ. 

ADVERTISEMENT

ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಕೆಲವೆಡೆ ಮುಂದಿನ ಮೂರು ದಿನಗಳು ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ಹೇಳಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.