ಪ್ರಾತಿನಿಧಿಕ ಚಿತ್ರ
ಬೆಂಗಳೂರು: ರಾಜ್ಯದ ಕೆಲವೆಡೆ ಫೆ.1ರಿಂದ ಮೂರು ದಿನಗಳು ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡಿನ ಚಾಮರಾಜನಗರ, ಮೈಸೂರು, ಹಾಸನ, ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಯ ಒಂದೆರಡು ಕಡೆ ಫೆ.1ರಂದು ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಂಭವವಿದೆ. ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿಯ ಒಂದೆರಡು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.
ಈ ಜಿಲ್ಲೆಗಳ ಕೆಲವೆಡೆ ಫೆ.2 ಮತ್ತು ಫೆ.3ರಂದೂ ಮಳೆಯಾಗುವ ಸಂಭವವಿದೆ. ಬೆಂಗಳೂರಿನಲ್ಲಿ ಒಣಹವೆ ಇರುವ ಸಾಧ್ಯತೆಯಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.