ಬೆಂಗಳೂರು: ನಗರದಲ್ಲಿ ಕರ್ಫ್ಯೂ ಜಾರಿಯಲ್ಲಿರುವುದರಿಂದ ಮೇ 4ರವರೆಗೆ ವಾರಾಂತ್ಯದಲ್ಲಿ ಅಂದರೆ ಶನಿವಾರ ಮತ್ತು ಭಾನುವಾರ ಮೆಟ್ರೊ ರೈಲು ಸಂಚಾರವನ್ನು ರದ್ದುಗೊಳಿಸಲಾಗಿದೆ.
ಅಲ್ಲದೆ, ವಾರದ ದಿನಗಳಲ್ಲಿ ಮೆಟ್ರೊ ರೈಲು ಸಂಚಾರ ಅವಧಿಯನ್ನೂ ಕಡಿತಗೊಳಿಸಲಾಗಿದೆ. ಸೋಮವಾರದಿಂದ ಶುಕ್ರವಾರದವರೆಗೆ ಬೆಳಿಗ್ಗೆ 7ರಿಂದ ರೈಲು ಸಂಚಾರ ಪ್ರಾರಂಭವಾಗುತ್ತದೆ. ಟರ್ಮಿನಲ್ ನಿಲ್ದಾಣಗಳಾದ ನಾಗಸಂದ್ರ, ರೇಷ್ಮೆ ಸಂಸ್ಥೆ, ಮೈಸೂರು ರಸ್ತೆ ಮತ್ತು ಬೈಯಪ್ಪನಹಳ್ಳಿ ನಿಲ್ದಾಣಗಳಿಂದ ಕೊನೆಯ ರೈಲು ಸಂಜೆ 7.30ಕ್ಕೆ ಹೊರಡುತ್ತದೆ ಎಂದು ಬಿಎಂಆರ್‌ಸಿಎಲ್ ಪ್ರಕಟಣೆಯಲ್ಲಿ ತಿಳಿಸಿದೆ.
ಶುಕ್ರವಾರ (ಏ.23) ಎಂದಿನಂತೆ ರಾತ್ರಿ 9ರವರೆಗೆ ಮೆಟ್ರೊ ಸೇವೆ ಇರಲಿದೆ. ಸೋಮವಾರದಿಂದ ರಾತ್ರಿ 7.30ಕ್ಕೆ ಕೊನೆಯ ರೈಲು ಈ ನಾಲ್ಕೂ ನಿಲ್ದಾಣಗಳಿಂದ ಹೊರಡಲಿದೆ ಎಂದು ನಿಗಮ ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.