ADVERTISEMENT

ಪೊಲೀಸರಿಗೆ ವಾರದ ರಜೆ ಕಡ್ಡಾಯ: ಡಿಜಿಪಿ ತುರ್ತು ಸುತ್ತೋಲೆ

​ಪ್ರಜಾವಾಣಿ ವಾರ್ತೆ
Published 28 ಜನವರಿ 2021, 15:02 IST
Last Updated 28 ಜನವರಿ 2021, 15:02 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ವಾರದ ರಜೆ ಸೌಲಭ್ಯವಿದ್ದರೂ ಹಲವು ಅಧಿಕಾರಿಗಳು ರಜೆ ನೀಡುತ್ತಿಲ್ಲವೆಂಬ ಆರೋಪ ಕೇಳಿಬಂದ ಬೆನ್ನಲ್ಲೇ, ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರು ತುರ್ತು ಸುತ್ತೋಲೆಯೊಂದನ್ನು ಗುರುವಾರ ಹೊರಡಿಸಿದ್ದಾರೆ.

‘ರಾಜ್ಯ ಪೊಲೀಸ್ ಸಿಬ್ಬಂದಿಗೆ ವಾರದಲ್ಲಿ ಒಂದು ದಿನ ಕಡ್ಡಾಯ ರಜೆ ನೀಡಬೇಕು. ತಪ್ಪಿದರೆ, ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ಸುತ್ತೋಲೆಯಲ್ಲಿ ಪ್ರವೀಣ್ ಸೂದ್ ತಿಳಿಸಿದ್ದಾರೆ.

ರಾಜ್ಯದ ಪೊಲೀಸ್ ಕಮಿಷನರ್‌ಗಳು, ಐಜಿಪಿಗಳು, ಜಿಲ್ಲಾ ಎಸ್ಪಿಗಳಿಗೆ ಈ ಸುತ್ತೋಲೆ ಕಳುಹಿಸಲಾಗಿದೆ.

ADVERTISEMENT

ಈ ಹಿಂದೆಯೂ ಸಿಬ್ಬಂದಿಗೆ ವಾರದ ರಜೆ ನೀಡುವ ಸಂಬಂಧ ಸುತ್ತೋಲೆ ಹೊರಡಿಸಲಾಗಿತ್ತು. ಆದರೆ, ಕೆಲಸದ ಒತ್ತಡದಿಂದಾಗಿ ಠಾಣಾಧಿಕಾರಿಗಳು ರಜೆ ನೀಡುತ್ತಿರಲಿಲ್ಲ. ಬೇಸತ್ತ ಸಿಬ್ಬಂದಿ, ಪ್ರವೀಣ್ ಸೂದ್ ಅವರಿಗೆ ಪತ್ರ ಬರೆದು ಅಳಲು ತೋಡಿಕೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.