ADVERTISEMENT

ಮೃತರ ಕುಟುಂಬಕ್ಕೆ ₹5 ಲಕ್ಷ ಪರಿಹಾರಕ್ಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 14 ಜೂನ್ 2021, 20:42 IST
Last Updated 14 ಜೂನ್ 2021, 20:42 IST

ಬೆಂಗಳೂರು: ‘ಕೋವಿಡ್‌ನಿಂದ ಮೃತಪಟ್ಟ ವ್ಯಕ್ತಿಗಳ ಕುಟುಂಬಗಳಿಗೆ ತಲಾ₹5 ಲಕ್ಷ ಪರಿಹಾರ ನೀಡಬೇಕು. ಬಡ ಕುಟುಂಬಗಳಿಗೆ ಸರ್ಕಾರದ ವತಿಯಿಂದ ಕನಿಷ್ಠ₹10 ಸಾವಿರ ಪರಿಹಾರ ಪ್ರಕಟಿಸಬೇಕು’ ಎಂದು ವೆಲ್‌ಫೇರ್‌ ಪಾರ್ಟಿ ಆಫ್‌ ಇಂಡಿಯಾ ರಾಜ್ಯ ಸಮಿತಿಯ ಉಪಾಧ್ಯಕ್ಷ ತಾಜುದ್ದೀನ್‌ ಇಳಕಲ್‌ ಒತ್ತಾಯಿಸಿದರು.

ಪಕ್ಷದ ವತಿಯಿಂದ ಸೋಮವಾರ ಹಮ್ಮಿಕೊಂಡಿದ್ದ ‘ಲಾಕ್‌ಡೌನ್‌ ಮತ್ತು ಅದರ ಪರಿಣಾಮ’ ಕುರಿತ ಆನ್‌ಲೈನ್‌ ವಿಚಾರಗೋಷ್ಠಿಯಲ್ಲಿ ಮಾತನಾಡಿದರು.

ವಿಚಾರವಾದಿ ನೂರ್‌ ಶ್ರೀಧರ್‌, ‘ಕೋವಿಡ್‌ ನಿಯಂತ್ರಿಸಲು ಲಾಕ್‌ಡೌನ್‌ ಅನಿವಾರ್ಯ ಹಾಗೂ ತಾತ್ಕಾಲಿಕ ಕ್ರಮ. ಸರ್ಕಾರವು ಆರ್ಥಿಕ ನೆರವು ಪ್ರಕಟಿಸುವ ಮೂಲಕ ಆತ್ಮಸ್ಥೈರ್ಯ ಮೂಡಿಸುವ ಕೆಲಸ ಮಾಡಬೇಕು ’ ಎಂದರು.

ADVERTISEMENT

ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ತಾಹೀರ್ ಹುಸೇನ್, ಪ್ರಧಾನ ಕಾರ್ಯದರ್ಶಿ ಎಂ.ಎಂ.ಹಬೀಬುಲ್ಲಾ ಖಾನ್, ರಾಜ್ಯ ಕಾರ್ಯದರ್ಶಿ ಆದಿಲ್ ಪಟೇಲ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.