ADVERTISEMENT

ವ್ಹೀಲಿಂಗ್: ದ್ವಿಚಕ್ರ ವಾಹನಗಳು ಜಪ್ತಿ

​ಪ್ರಜಾವಾಣಿ ವಾರ್ತೆ
Published 3 ಜೂನ್ 2019, 20:07 IST
Last Updated 3 ಜೂನ್ 2019, 20:07 IST
ವ್ಹೀಲಿಂಗ್ ಮಾಡುತ್ತಿದ್ದ ಯುವಕ
ವ್ಹೀಲಿಂಗ್ ಮಾಡುತ್ತಿದ್ದ ಯುವಕ   

ಬೆಂಗಳೂರು: ರಸ್ತೆಯಲ್ಲಿ ವ್ಹೀಲಿಂಗ್ ಮಾಡಿ ಇತರೆ ವಾಹನಗಳ ಸಂಚಾರಕ್ಕೆ ಅಡ್ಡಿಪಡಿಸುತ್ತಿದ್ದ ಯುವಕರಿಗೆ ಬಿಸಿ ಮುಟ್ಟಿಸಿರುವ ಸಂಚಾರ ಪೊಲೀಸರು, 23 ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಿದ್ದಾರೆ.

ವಿಭಾಗವಾರು ಡಿಸಿಪಿಗಳ ನೇತೃತ್ವದಲ್ಲಿ ಶನಿವಾರ ಹಾಗೂ ಭಾನುವಾರ ಕಾರ್ಯಾಚರಣೆ ನಡೆಸಿದ ಪೊಲೀಸರು, ವ್ಹೀಲಿಂಗ್ ಮಾಡುತ್ತಿದ್ದ ಯುವಕರ ಫೋಟೊ ಹಾಗೂ ವಿಡಿಯೊ ಚಿತ್ರೀಕರಿಸಿಕೊಂಡಿದ್ದಾರೆ. ಕೆಲವರನ್ನು ವಶಕ್ಕೆ ಪಡೆದಿದ್ದಾರೆ.

‘ನಗರದ ಪ್ರಮುಖ ರಸ್ತೆಗಳು ಹಾಗೂ ಮೇಲ್ಸೇತುವೆ ಮೇಲೆ ಕೆಲ ಯುವಕರು ವ್ಹೀಲಿಂಗ್ ಮಾಡುತ್ತಿದ್ದ ಬಗ್ಗೆ ಮಾಹಿತಿ ಬಂದಿತ್ತು. ಅದನ್ನು ಆಧರಿಸಿ ವಿಶೇಷ ಕಾರ್ಯಾಚರಣೆ ನಡೆಸಲಾಯಿತು’ ಎಂದು ಹೆಚ್ಚುವರಿ ಪೊಲೀಸ್ ಕಮಿಷನರ್ ಹರಿಶೇಖರನ್ ತಿಳಿಸಿದರು.

ADVERTISEMENT

‘ವ್ಹೀಲಿಂಗ್‌ಗೆ ಬಳಸುತ್ತಿದ್ದ ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಿ ಅವುಗಳ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ವಿಚಾರಣೆಗೆ ಹಾಜರಾಗುವಂತೆ ವಾಹನಗಳ ಮಾಲೀಕರಿಗೆ ನೋಟಿಸ್ ನೀಡಲಾಗಿದೆ’ ಎಂದರು.

‘ಪ್ರಸಕ್ತ ವರ್ಷ 156 ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ. ನಮ್ಮ ಕಾರ್ಯಾಚರಣೆ ಮುಂದುವರಿಯಲಿದೆ. ವ್ಹೀಲಿಂಗ್ ಮಾಡುವ ಯುವಕರಿಗೆ ಯಾರಾದರೂ ಬೈಕ್‌ಗಳನ್ನು ಕೊಟ್ಟರೆ, ಅವರ ವಿರುದ್ಧವೂ ಪ್ರಕರಣ ದಾಖಲಿಸಲಾಗುವುದು’ ಎಂದು ಹರಿಶೇಖರನ್ ಎಚ್ಚರಿಕೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.