ADVERTISEMENT

ಅಪಾಯಕಾರಿ ರೀತಿಯಲ್ಲಿ ಬೈಕ್ ವ್ಹೀಲಿಂಗ್‌: ಯುವಕ ಬಂಧನ

​ಪ್ರಜಾವಾಣಿ ವಾರ್ತೆ
Published 16 ಆಗಸ್ಟ್ 2019, 6:51 IST
Last Updated 16 ಆಗಸ್ಟ್ 2019, 6:51 IST
ಆರೋಪಿ ಸತೀಶ್ ಕುಮಾರ್‌ನ ಬೈಕ್ ವ್ಹೀಲಿಂಗ್ ದೃಶ್ಯ
ಆರೋಪಿ ಸತೀಶ್ ಕುಮಾರ್‌ನ ಬೈಕ್ ವ್ಹೀಲಿಂಗ್ ದೃಶ್ಯ   

ಬೆಂಗಳೂರು: ದೇವನಹಳ್ಳಿ ಬಳಿ ಬೈಕ್ ವ್ಹೀಲಿಂಗ್ ಮಾಡುತ್ತಿದ್ದ ಆರೋ‍ಪದಡಿ ಸತೀಶ್‌ಕುಮಾರ್ (19) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

‘ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪದಲ್ಲೇ ಆರೋಪಿ, ಅಪಾಯಕಾರಿ ರೀತಿಯಲ್ಲಿ ಬೈಕ್ ವ್ಹೀಲಿಂಗ್ ಮಾಡುತ್ತಿದ್ದ’ ಎಂದು ಪೊಲೀಸರು ಹೇಳಿದರು.

‘ಆರೋಪಿಯು ವ್ಹೀಲಿಂಗ್ ಮಾಡುತ್ತಿದ್ದ ದೃಶ್ಯವನ್ನು ಸಾರ್ವಜನಿಕರೊಬ್ಬರು ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡಿದ್ದರು. ಸಾಮಾಜಿಕ ಜಾಲತಾಣದ ಮೂಲಕ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ’ ಎಂದರು.

ADVERTISEMENT

‘ವ್ಹೀಲಿಂಗ್ ಮಾಡಲು ಬಳಸಿದ್ದ ಕೆಎ 03, ಕ್ಯೂ 9382 ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.