ADVERTISEMENT

ವೀಲಿಂಗ್‌: ಎಂಟು ಮಂದಿ ವಿರುದ್ಧ ಪ್ರಕರಣ

​ಪ್ರಜಾವಾಣಿ ವಾರ್ತೆ
Published 25 ಆಗಸ್ಟ್ 2021, 4:43 IST
Last Updated 25 ಆಗಸ್ಟ್ 2021, 4:43 IST

ಬೆಂಗಳೂರು: ವೀಲಿಂಗ್‌ ಮಾಡುತ್ತಾ ಸಾರ್ವಜನಿಕರಿಗೆ ಕಿರಿಕಿರಿ ಉಂಟುಮಾಡುತ್ತಿದ್ದವರ ಪತ್ತೆಗಾಗಿ ಇದೇ 16ರಿಂದ 22ರ ಅವಧಿಯಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿದ್ದ ಬೆಂಗಳೂರು ನಗರ ಸಂಚಾರ ವಿಭಾಗದ ಪೊಲೀಸರು ಒಟ್ಟು 8 ಮಂದಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಈ ಪೈಕಿ ಇಬ್ಬರು 16 ವರ್ಷದವರಾಗಿದ್ದಾರೆ.

‘ಎಂಟು ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಲಾಗಿದ್ದು, ಅವುಗಳ ಮಾಲೀಕರ ವಿರುದ್ಧವೂ ಕಾನೂನಿನ ಅನ್ವಯ ಕ್ರಮ ಕೈಗೊಳ್ಳಲಾಗಿದೆ. ಅಪ್ರಾಪ್ತ ವಯಸ್ಸಿನ ಚಾಲಕರ ತಂದೆ ತಾಯಿ ವಿರುದ್ಧವೂ ಕ್ರಮ ಜರುಗಿಸಲಾಗುತ್ತದೆ’ ಎಂದು ಪೊಲೀಸರು ಹೇಳಿದ್ದಾರೆ.

‘ಕೆ.ಆರ್‌.ಪುರ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ನಾಲ್ಕು, ಬ್ಯಾಟರಾಯನಪುರ ಠಾಣಾ ವ್ಯಾಪ್ತಿಯಲ್ಲಿ ಎರಡು ಹಾಗೂ ಪುಲಕೇಶಿನಗರ ಮತ್ತು ಬಾಣಸವಾಡಿ ಠಾಣಾ ವ್ಯಾಪ್ತಿಯಲ್ಲಿ ತಲಾ ಒಂದು ಪ್ರಕರಣ ದಾಖಲಾಗಿದೆ. ಎಂಟು ಜನರ ಚಾಲನಾ ಪರವಾನಗಿಯನ್ನು ರದ್ದುಪಡಿಸಲಾಗುತ್ತದೆ. ಸಾರ್ವಜನಿಕರ ಹಿತದೃಷ್ಟಿಯಿಂದ ಮುಂದಿನ ದಿನಗಳಲ್ಲೂ ವಿಶೇಷ ಕಾರ್ಯಾಚರಣೆ ನಡೆಸಲಾಗುತ್ತದೆ’ ಎಂದೂ ಅವರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.