ವೈಟ್ ಟಾಪಿಂಗ್ ಕಾಮಗಾರಿ
ಬೆಂಗಳೂರು: ವೈಟ್‌ಫೀಲ್ಡ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಬಳಗೆರೆ ‘ಟಿ’ ಜಂಕ್ಷನ್‌ನಿಂದ ಪಣತ್ತೂರು ರೈಲ್ವೆ ಸೇತುವೆ ಜಂಕ್ಷನ್‌ವರೆಗೆ ಬಿಬಿಎಂಪಿ ವತಿಯಿಂದ ವೈಟ್ ಟಾಪಿಂಗ್ ಕಾಮಗಾರಿ ಕೈಗೊಂಡಿರುವುದರಿಂದ ವಾಹನ ಸಂಚಾರದಲ್ಲಿ ಮಾರ್ಪಾಡು ಮಾಡಲಾಗಿದೆ.
ಆಗಸ್ಟ್ 6ರಿಂದ 10ರವರೆಗೆ ಪಣತ್ತೂರು ರೈಲ್ವೆ ಸೇತುವೆ ರಸ್ತೆಯಿಂದ ಬಳಗೆರೆ ‘ಟಿ’ ಜಂಕ್ಷನ್‌ವರೆಗೆ ವಾಹನ ಸಂಚಾರ ನಿರ್ಬಂಧಿಸಲಾಗಿದೆ.
ಪರ್ಯಾಯ ಮಾರ್ಗ: ಪಣತ್ತೂರು ಕಡೆಯಿಂದ ಬಳಗೆರೆ ಕಡೆಗೆ ಹೋಗುವ ವಾಹನ ಸವಾರರು ಪಣತ್ತೂರು ದಿಣ್ಣೆ ರಸ್ತೆಯಲ್ಲಿ ಚಲಿಸಿ ಪಣತ್ತೂರು ದಿಣ್ಣೆ ಬಳಿ ಎಡ ತಿರುವು ಪಡೆದುಕೊಳ್ಳಬೇಕು. ಸಿಲ್ವರ್ ಓಕ್ ರಸ್ತೆಯಿಂದ ಬಳಗೆರೆ, ವಿಬ್‌ಗಯಾರ್ ರಸ್ತೆ ಮತ್ತು ವರ್ತೂರು ಕಡೆಗೆ ಸಂಚರಿಸಬಹುದು.
ಬಳಗೆರೆ ‘ಟಿ’ ಜಂಕ್ಷನ್ ಕಡೆಯಿಂದ ಪಣತ್ತೂರು ಕಡೆಗೆ ಹೋಗುವ ವಾಹನ ಸವಾರರು ಪಣತ್ತೂರು ದಿಣ್ಣೆ ರಸ್ತೆ, ವಿಬ್‌ಗಯಾರ್ ರಸ್ತೆ ಹಾಗೂ ಮಾರತ್ತಹಳ್ಳಿ ಸೇತುವೆ ಮೂಲಕ ಪಣತ್ತೂರು ಕಡೆಗೆ ಹೋಗಬಹುದು ಎಂದು ಸಂಚಾರ ವಿಭಾಗದ ಡಿಸಿಪಿ ಸಾಹಿಲ್ ಬಾಗ್ಲಾ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.