ಬೆಂಗಳೂರು: ಬಿಬಿಎಂಪಿ ದಕ್ಷಿಣ ಹಾಗೂ ಪಶ್ಚಿಮ ವಲಯದಲ್ಲಿ ವೈಟ್ ಟಾಪಿಂಗ್ ಕಾಮಗಾರಿಯಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿರುವ ಇಬ್ಬರು ಗುತ್ತಿಗೆದಾರರಿಗೆ ತಲಾ ₹ 5 ಲಕ್ಷ ದಂಡ ವಿಧಿಸಲಾಗಿದೆ.
ದಕ್ಷಿಣ ವಲಯ ವ್ಯಾಪ್ತಿಯಲ್ಲಿ ವಿಜಯನಗರ ವಿಧಾನಸಭಾ ಕ್ಷೇತ್ರದ ವೆಸ್ಟ್ ಆಫ್ ಕಾರ್ಡ್ ರಸ್ತೆ ಹಾಗೂ ಹೊಸಕೆರೆಹಳ್ಳಿ ಮುಖ್ಯರಸ್ತೆಯಲ್ಲಿ ಗುತ್ತಿಗೆ ಸಂಸ್ಥೆ ಜೆಎಂಸಿಗೆ ಸಂಸ್ಥೆ ವೈಟ್ ಟಾಪಿಂಗ್ ಕಾಮಗಾರಿಯನ್ನು ಪ್ರಾರಂಭಿಸದೆ, ಸಾರ್ವಜನಿಕರಿಗೆ ಅನಾನುಕೂಲ ಉಂಟು ಮಾಡಿರುವುದರಿಂದ ದಂಡ ವಿಧಿಸಲಾಗಿದೆ.
ಪಶ್ಚಿಮ ವಲಯ ವ್ಯಾಪ್ತಿಯಲ್ಲಿ ಓಷಿಯನ್ ಕಸ್ಟ್ರಕ್ಷನ್ ಸಂಸ್ಥೆ ವೈಯಾಲಿ ಕಾವಲ್ ರಸ್ತೆಯಲ್ಲಿ ವೈಟ್ ಟಾಪಿಂಗ್ ಕಾಮಗಾರಿಯನ್ನು ನಿಧಾನಗತಿಯಲ್ಲಿ ನಿರ್ವಹಿಸುತ್ತಿರುವುದರಿಂದ ದಂಡ ವಿಧಿಸಲಾಗಿದೆ. ವೈಟ್ ಟಾಪಿಂಗ್ ಕಾಮಗಾರಿಯನ್ನು ತ್ವರಿತಗತಿ ನಡೆಸದವರಿಗೆ ದಂಡ ವಿಧಿಸಲು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಪ್ರಧಾನ ಎಂಜಿನಿಯರ್ ಬಿ.ಎಸ್ ಪ್ರಹ್ಲಾದ್ ಅವರಿಗೆ ಆದೇಶಿಸಿದ್ದರು. ಅದರಂತೆ, ರಸ್ತೆ ಮತ್ತು ಮೂಲಸೌಕರ್ಯ ವಿಭಾಗದ ಆಯಾ ವಲಯಗಳ ಕಾರ್ಯಪಾಲಕ ಎಂಜಿನಿಯರ್ ಅವರು ಗುತ್ತಿಗೆದಾರರಿಗೆ ದಂಡ ವಿಧಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.