ಯಲಹಂಕ: ಬ್ಯಾಟರಾಯನಪುರ ಕ್ಷೇತ್ರ ವ್ಯಾಪ್ತಿಯ ವಿದ್ಯಾನಗರ ಕ್ರಾಸ್-ಉತ್ತನಹಳ್ಳಿ ಮುಖ್ಯರಸ್ತೆಯಲ್ಲಿ ನಿರ್ಮಿಸಿರುವ ವೈಟ್ ಟಾಪಿಂಗ್ ರಸ್ತೆಯನ್ನು ಕಂದಾಯ ಸಚಿವ ಕೃಷ್ಣಬೈರೇಗೌಡ ಸಾರ್ವಜನಿಕ ಬಳಕೆಗೆ ಮುಕ್ತಗೊಳಿಸಿದರು.
ನಂತರ, ಈ ರಸ್ತೆಯು ಏರ್‌ಪೋರ್ಟ್ ಮುಖ್ಯರಸ್ತೆಯ ಮೂಲಕ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಮುಖ್ಯರಸ್ತೆಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯಾಗಿದೆ’ ಎಂದು ಹೇಳಿದರು.
‘ಈ ರಸ್ತೆಯಲ್ಲಿ ಭಾರೀ ವಾಹನಗಳ ಸಂಚಾರ ಹೆಚ್ಚಾಗಿತ್ತು. ಇದರಿಂದ ವಿದ್ಯಾನಗರ ಕ್ರಾಸ್ ಬಳಿ ವಾಹನಗಳು ತಿರುವು ಪಡೆಯುವ ಸ್ಥಳದಲ್ಲಿ ಎಷ್ಟು ಸಾರಿ ಗುಣಮಟ್ಟದ ರಸ್ತೆ ಮಾಡಿದ್ದರೂ, ಗುಂಡಿಗಳು ಬೀಳುತ್ತಿದ್ದವರು. ಈಗ ವೈಟ್ ಟಾಪಿಂಗ್ ರಸ್ತೆಯಾಗಿಸಲಾಗಿದೆ. ಈಗ ಇಲ್ಲಿ ಸಾರ್ವಜನಿಕರು ಎದುರಿಸುತ್ತಿದ್ದ ಸಮಸ್ಯೆ ನಿವಾರಣೆಯಾಗಿದೆ ಎಂದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್.ಕೆ.ಮಹೇಶ್‌ಕುಮಾರ್, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಉದಯಶಂಕರ್, ಕೆಡಿಪಿ ಸದಸ್ಯ ಬಿ.ಕೆ.ನಾರಾಯಣಸ್ವಾಮಿ, ಗ್ರಾಮಪಂಚಾಯಿತಿ ಅಧ್ಯಕ್ಷ ಅನಂತ್ ಮತ್ತಿತರರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.