ವೈಟ್ ಟಾಪಿಂಗ್ ಕಾಮಗಾರಿ
ಬೆಂಗಳೂರು: ಪುಲಕೇಶಿ ನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಎಂಎಂ ರಸ್ತೆಯಲ್ಲಿ ಬಿಬಿಎಂಪಿ ವತಿಯಿಂದ ವೈಟ್ ಟಾಪಿಂಗ್ ಕಾಮಗಾರಿ ಕೈಗೊಂಡಿರುವುದರಿಂದ ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದೆ.
ಮಾಸ್ಕ್ ಜಂಕ್ಷನ್‌ನಿಂದ ಲಾಜರ್ ರಸ್ತೆ ಜಂಕ್ಷನ್‌ವರೆಗೆ ವಾಹನ ಸಂಚಾರ ನಿರ್ಬಂಧ ಮಾಡಲಾಗಿದೆ.
ಎಂ.ಎಂ. ರಸ್ತೆ ಮತ್ತು ಮಾಸ್ಕ್ ರಸ್ತೆಯಲ್ಲಿ ಎಲ್ಲ ರೀತಿಯ ವಾಹನಗಳ ಪಾರ್ಕಿಂಗ್ ಅನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ ಎಂದು ಸಂಚಾರ ಪೂರ್ವ ವಿಭಾಗದ ಸಾಹಿಲ್ ಬಾಗ್ಲಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.