ADVERTISEMENT

ಪಾಲಿಕೆ ಕಚೇರಿಗೆ ಮುತ್ತಿಗೆ

​ಪ್ರಜಾವಾಣಿ ವಾರ್ತೆ
Published 7 ಜುಲೈ 2019, 19:58 IST
Last Updated 7 ಜುಲೈ 2019, 19:58 IST
ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮಹಿಳೆಯರು ವರ್ತೂರು ಮುಖ್ಯರಸ್ತೆಯಲ್ಲಿ ಪ್ರತಿಭಟನೆ ನಡೆಸಿದರು
ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮಹಿಳೆಯರು ವರ್ತೂರು ಮುಖ್ಯರಸ್ತೆಯಲ್ಲಿ ಪ್ರತಿಭಟನೆ ನಡೆಸಿದರು   

ವೈಟ್‌ಫೀಲ್ಡ್: ಕುಡಿಯುವ ನೀರು ಪೂರೈಕೆ ಹಾಗೂ ರಸ್ತೆ ವಿಸ್ತರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇ ರಿಕೆಗೆ ಆಗ್ರಹಿಸಿ ವರ್ತೂರು ವಾರ್ಡ್‌ನ ಕಾಂಗ್ರೆಸ್ ಮುಖಂಡರು ಮತ್ತು ಮಹಿಳೆ ಯರು ಖಾಲಿ ಕೊಡಗಳೊಂದಿಗೆ ಬಿಬಿ ಎಂಪಿ ವಾರ್ಡ್ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.

‘ಮಹದೇವಪುರ– ವರ್ತೂರು ರಸ್ತೆ ವಿಸ್ತರಣೆಯಾಗದೆ ದಿನನಿತ್ಯ ಸಂಚಾರ ದಟ್ಟಾಣೆ ಹೆಚ್ಚಾಗಿದ್ದು ಅಪಘಾತಗಳು ಸಾಮಾನ್ಯವಾಗಿವೆ. ಮಕ್ಕಳು ಹಾಗೂ ವೃದ್ಧರು ರಸ್ತೆ ದಾಟಲು ಕಷ್ಟಪಡುತ್ತಿದ್ದಾರೆ.’ಎಂದು ಪ್ರತಿಭಟನಾಕಾರರು ಆರೋಪಿಸಿದರು.

‘ವರ್ತೂರು ವಾರ್ಡ್‌ನಲ್ಲಿ ಕುಡಿ ಯುವ ನೀರಿನ ಸಮಸ್ಯೆ ಬಿಗಡಾಯಿಸಿದೆ. ಟ್ಯಾಂಕರ್ ನೀರಿನ ಮೊರೆಹೋಗ ಬೇಕಿದೆ. ಅಧಿಕಾ ರಿಗಳು ಹಾಗೂ ಜನಪ್ರತಿನಿಧಿಗಳಿಗೆ ಹಲವು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ’ ಎಂದರು.

ADVERTISEMENT

ವರ್ತೂರು ಗಾಂಧಿ ವೃತ್ತದಿಂದ ಆರಂಭವಾದ ಪ್ರತಿಭಟನಾ ಮೆರವ ಣಿಗೆಯು ವರ್ತೂರು ಮುಖ್ಯ ರಸ್ತೆಯಲ್ಲಿ ಸಾಗಿತು. ಬಿಬಿಎಂಪಿ ಸಹಾಯಕ ಕಾರ್ಯಪಾಲಕ ಎಂಜಿನಿ ಯರ್ ವಿಜಯ್ ಕುಮಾರ್ ಮನವಿ ಸ್ವೀಕರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.