ADVERTISEMENT

ಇನ್‌ಸ್ಪೆಕ್ಟರ್‌, ಸಿಬ್ಬಂದಿಯನ್ನು ಕೇರಳ ಪೊಲೀಸರು ಬಂಧಿಸಿಲ್ಲ: ಡಿಸಿಪಿ

​ಪ್ರಜಾವಾಣಿ ವಾರ್ತೆ
Published 3 ಆಗಸ್ಟ್ 2023, 11:45 IST
Last Updated 3 ಆಗಸ್ಟ್ 2023, 11:45 IST
ಎಸ್. ಗಿರೀಶ್
ಎಸ್. ಗಿರೀಶ್   

ಬೆಂಗಳೂರು: ‘ವೈಟ್‌ಫೀಲ್ಡ್ ಸೈಬರ್ ಕ್ರೈಂ ಠಾಣೆಯ ಇನ್‌ಸ್ಪೆಕ್ಟರ್ ಶಿವಪ್ರಕಾಶ್ ಹಾಗೂ ಸಿಬ್ಬಂದಿಯನ್ನು ಕೇರಳ ಪೊಲೀಸರು ಬಂಧಿಸಿಲ್ಲ. ಪ್ರಕರಣ ಸಂಬಂಧ ನೋಟಿಸ್ ನೀಡಿ ವಿಚಾರಣೆ ನಡೆಸಿ ಬಿಡುಗಡೆ ಮಾಡಿದ್ದಾರೆ’ ಎಂದು ವೈಟ್‌ಫೀಲ್ಡ್ ವಿಭಾಗದ ಡಿಸಿಪಿ ಎಸ್‌. ಗಿರೀಶ್ ತಿಳಿಸಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿರುವ ಅವರು, ‘ಸೈಬರ್ ಕ್ರೈಂ ಠಾಣೆಯಲ್ಲಿ ದಾಖಲಾಗಿದ್ದ ವಂಚನೆ ಪ್ರಕರಣದ ಆರೋಪಿಯನ್ನು ಬಂಧಿಸಲು ಕೇರಳದ ಕೊಚ್ಚಿಗೆ ಹೋದಾಗ ಶಿವಪ್ರಕಾಶ್ ಹಾಗೂ ಸಿಬ್ಬಂದಿಯನ್ನು ಸ್ಥಳೀಯ ಪೊಲೀಸರು ವಶಕ್ಕೆ ಪಡೆದಿದ್ದರು’ ಎಂದಿದ್ದಾರೆ.

‘ಎಸಿಪಿ ನೇತೃತ್ವದ ತಂಡ ಈಗಾಗಲೇ ಕೇರಳದ ಕೊಚ್ಚಿಗೆ ಹೋಗಿದೆ. ವಂಚನೆ ಪ್ರಕರಣದ ಬಗ್ಗೆ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಲಾಗಿದೆ’ ಎಂದು ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.