ADVERTISEMENT

ಪತಿ ಮೇಲೆ ಪತ್ನಿ ಮನೆಯವರಿಂದ ಹಲ್ಲೆ

​ಪ್ರಜಾವಾಣಿ ವಾರ್ತೆ
Published 12 ಜನವರಿ 2020, 20:26 IST
Last Updated 12 ಜನವರಿ 2020, 20:26 IST

ಬೆಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿ ಕಡೆಯವರು ರಸ್ತೆಯಲ್ಲೇ ಹಲ್ಲೆ ನಡೆಸಿರುವುದಾಗಿ ಆರೋಪಿಸಿ ಪತಿ ಬಾಣಸವಾಡಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಮಾರುತಿ ಸೇವಾನಗರದ ವಿನೋದ್ ಕುಮಾರ್ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು, ಪತ್ನಿ, ಆಕೆಯ ತಾಯಿ ಮತ್ತು ಸಹೋದರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ವಿನೋದ್ ಮೇಲೆ ಹಲ್ಲೆ ನಡೆಸುತ್ತಿರುವ ವಿಡಿಯೊ ವೈರಲ್ ಆಗಿದೆ.

2019ರಲ್ಲಿ ವಿನೋದ್ ಅವರು ವಿವಾಹವಾಗಿದ್ದರು. ದಂಪತಿ ಮದ್ಯೆ ಕೌಟುಂಬಿಕ ವಿಚಾರವಾಗಿ ಆಗಾಗ ಜಗಳ ನಡೆಯುತ್ತಿತ್ತು. ಪತ್ನಿ ಇತ್ತೀಚೆಗೆ ಹೆರಿಗೆಗೆಂದು ತವರಿಗೆ ಹೋಗಿದ್ದರು. ಜ. 9ರಂದು ವಿನೋದ್ ಮನೆಯ ಬಳಿ ಬಂದ ಪತ್ನಿಯ ಮನೆಯವರು ಕೌಟುಂಬಿಕ ವಿಚಾರವಾಗಿ ಜಗಳ ಮಾಡಿದ್ದರು. ಮನೆ ಮುಂದಿನ ರಸ್ತೆಗೆ ಕರೆಕೊಂಡು ಬಂದು ಹಲ್ಲೆ ನಡೆಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.